ಚಿತ್ರ ಮಂಜರಿ

ಆಶಾ ಪಾರೇಖ್‌ಗೆ ದಾದಾ ಸಾಹೇಬ್ ಫಾಲ್ಕೆ ಗರಿ

ಹೊಸದಿಲ್ಲಿ: ‘ದಿಲ್ ದೇಕೆ ದೇಖೋ’ ಖ್ಯಾತಿಯ ಬಾಲಿವುಡ್‌ನ ಹಿರಿಯ ನಟಿ, ನಿರ್ಮಾಪಕಿ ಆಶಾ ಪಾರೇಖ್ ೨೦೨೦ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆಶಾ ಬೋಸ್ಲೆ, ಹೇಮಾ ಮಾಲಿನಿ, ಪೂನಂ ಧಿಲ್ಲೋನ್, ಉದಿತ್ ನಾರಾಯಣ್ ಮತ್ತು ಟಿ.ಎಸ್.ನಾಗಾಭರಣ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಭಾರತೀಯ ಚಿತ್ರರಂಗದಲ್ಲಿನ ಸಾಧನೆಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಯನ್ನು ೭೯ರ ಹರೆಯದ ಪಾರೇಖ್‌ಗೆ ನೀಡಲು ತೀರ್ಮಾನ ಮಾಡಿದೆ.
೬೮ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಗೌರವ ನೀಡಲಾಗುವುದು’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ಹೇಳಿದ್ದಾರೆ.

ಸಂಕ್ಷಿಪ್ತ ಪರಿಚಯ
೧೯೫೦ರ ದಶಕದಲ್ಲಿ ಬಾಲ ನಟಿಯಾಗಿ ಬಾಲಿವುಡ್‌ಗೆ ಕಾಲಿಟ್ಟ ಪಾರೇಖ್, ೧೯೬೦-೭೦ರ ದಶಕದಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದ ಯಶಸ್ವಿ ತಾರೆ. ೧೯೫೨ರಲ್ಲಿ ‘ಆಸ್ಮಾನ್’ ಚಿತ್ರದ ಮೂಲಕ ತಮ್ಮ ೧೦ನೇ ವಯಸ್ಸಿನಿಂದಲೇ ನಟನೆ ಆರಂಭಿಸಿದ ಅವರು, ಇಲ್ಲಿವರೆಗೆ ೯೫ಕ್ಕೂ ಹೆಚ್ಚು ಚಿತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ೧೯೫೪ರಲ್ಲಿ ಬಿಮಲ್ ರಾಯ್ ಅವರ ‘ಬಾಪ್ ಬೇಟಿ’ ಚಿತ್ರದ ಮೂಲಕ ಆಶಾ ಹಿಂದಿ ಚಿತ್ರರಂಗದಲ್ಲಿ ಚಿರಪರಿಚಿತರಾದರು.

೧೯೫೯ರಲ್ಲಿ ಅಂದಿನ ಸೂಪರ್ ಸ್ಟಾರ್ ಶಮ್ಮಿ ಕಪೂರ್ಗೆ ಜೊತೆಯಾಗಿ ನಾಸೀರ್ ಹುಸೈನ್ ಅವರ ‘ದಿಲ್ ದೇಕೆ ದೇಖೋ’ ಚಿತ್ರದಲ್ಲಿ ನಾಯಕಿಯಾಗಿ ಬಡ್ತಿ ಪಡೆದು, ಮೊದಲ ಚಿತ್ರದಲ್ಲಿಯೇ ಪ್ರೇಕ್ಷಕರ ಮನ ಗೆದ್ದರು. ’ಕಟಿ ಪತಂಗ್, ತೀಸ್ರಿ ಮಂಜಿಲ್, ಬಹರೋನ್ ಖೆ ಸಪ್ನೆ, ಪ್ಯಾರ್ ಕಾ ಮೌಸಂ’ ಮೊದಲಾದ ಚಿತ್ರಗಳ ಮೂಲಕ ಹಿಂದಿ ಚಿತ್ರರಂಗದಲ್ಲಿನ ಅತ್ಯಂತ ಪ್ರಭಾವಶಾಲಿ ನಟಿಯಾಗಿ ಹೊರಹೊಮ್ಮಿದರು.

ನಿರ್ಮಾಪಕಿ, ನಿರ್ದೇಶಕಿಯಾಗಿಯೂ ಗುರುತಿಸಿಕೊಂಡ ಪಾರೇಖ್, ೧೯೯೦ರಲ್ಲಿ ‘ಕೋರ ಕಾಗಜ್‘ ಎಂಬ ಟಿವಿ ಧಾರವಾಹಿಯಲ್ಲಿಯೂ ಕಾಣಿಸಿಕೊಂಡರು.
ಪ್ರಶಸ್ತಿಗಳು: ೧೯೯೨ರಲ್ಲಿ ಪದ್ಮಶ್ರೀ, ಪಡೆದ ಅವರು ೧೯೯೮?೨೦೦೧ರ ವರೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್ಸಿ)ಅಧ್ಯಕ್ಷರಾಗಿದ್ದರು. ಸೂಪರ್ಸ್ಟಾರ್ ರಜನಿಕಾಂತ್ ೨೦೧೯ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago