Mysore
33
few clouds

Social Media

ಶನಿವಾರ, 07 ಮಾರ್ಚ್ 2026
Light
Dark

ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ನಟ ರಿಷಬ್ ಶೆಟ್ಟಿ ಭಾಜನ

ಬೆಂಗಳೂರು : ನಟ ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ  ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ  ತಮ್ಮದಾಗಿಸಿಕೊಂಡಿದ್ದಾರೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!