ಬೆಂಗಳೂರು : ಮಹಿಳೆಯೊಬ್ಬರಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ವಿಚಾರಣೆಗೆ ಹಾಜರಾಗಿ ತಪ್ಪೊಪ್ಪಿಕೊಂಡಿದ್ದಾರೆ.
ನಟ ದರ್ಶನ್ ಅವರ ಸಾಕು ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದೆ ಎಂದು ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಸಿಸಿಟಿವಿ ಪುಟೇಜ್ ಜೊತೆಗೆ ವಿಚಾರಣೆಗೆ ಬರುವಂತೆ ದರ್ಶನ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು, ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದ ದರ್ಶನ್ ಅವರು ತಪ್ಪೊಪ್ಪಿಕೊಂಡಿದ್ದಾರೆ.
ಘಟನೆ ನಡೆದಾಗ ನಾನು ಗುಜರಾತ್ ನಲ್ಲಿ ಶೂಟಿಂಗ್ ನಲ್ಲಿದ್ದೆ. ನಮ್ಮ ನಾಯಿ ಕಚ್ಚಿದ ವಿಚಾರ ತಿಳಿದು ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವಂತೆ ತಿಳಿಸಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಆರೋಪವನ್ನು ಒಪ್ಪಿಕೊಂಡಿದ್ದಾರೆ.
ನಮ್ಮ ನಾಯಿಯನ್ನು ನೋಡಿಕೊಳ್ಳುತ್ತಿರುವ ವ್ಯಕ್ತಿ ನನ್ನ ಅಭಿಮಾನಿ, ಇನ್ನು ಮುಂದೆ ಎಚ್ಚರಿಕೆವಹಿಸುವಂತೆ ಆತನಿಗೆ ತಿಳಿಸಿದ್ದೇನೆ. ಆತನ ನಿರ್ಲಕ್ಷದಿಂದ ಈ ಅತಾಚೂರ್ಯ ಸಂಭವಿಸಿದೆ, ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇನೆ. ಮನೆಯ ಸುತ್ತ ಹೊಸದಾಗಿ ಸಿಸಿ ಕ್ಯಾಮೆರಾ ಅಳವಡಿಸಿದ್ದೇನೆ. ದರ್ಶನ್ ಪೊಲೀಸರ ಮುಂದೆ ಹೇಳಿಕೆ ನೀಡಿರುವುದಾಗಿ ಪೊಲೀಸ್ ಅಧಿಕಾರಿಯೋಬ್ಬರು ತಿಳಿಸಿದ್ದಾರೆ.





