ಚಿತ್ರ ಮಂಜರಿ

ಶಿವಣ್ಣ-ರಜನಿ ಕಾಂಬಿನೇಷನ್ ನ ಜೈಲರ್ ಸಿನಿಮಾದ ಆಡಿಯೋ ರಿಲೀಸ್ ಗೆ ಡೇಟ್‌ ಫಿಕ್ಸ್

ಇದೇ ಮೊದಲ ಬಾರಿಗೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕನ್ನಡದ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಚಿತ್ರವೊಂದು ರೆಡಿಯಾಗಿದೆ. ಜೈಲರ್ ಹೆಸರಿನಲ್ಲಿ ಮೂಡಿ ಬಂದಿರುವ ಸಿನಿಮಾದ ಆಡಿಯೋ ರಿಲೀಸ್ ಇವೆಂಟ್ ಇದೇ ಜುಲೈ 28ರಂದು ಚೆನ್ನೈನಲ್ಲಿ ನಡೆಯಲಿದೆ. ನೆಹರು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಶಿವಣ್ಣ ಕೂಡ ಭಾಗಿಯಾಗಲಿದ್ದಾರೆ.

ಮತ್ತೊಂದು ಖುಷಿ ಸಂಗತಿ ಎಂದರೆ ‘ಜೈಲರ್’ಸಿನಿಮಾದ ಕರ್ನಾಟಕ ವಿತರಣಾ ಹಕ್ಕು ಜಯಣ್ಣಗೆ ಸಿಕ್ಕಿದ್ದು, ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೊಡ್ಡದೊಂದು ಗೆಲುವು ಕಾಣದ ಜಯಣ್ಣಗೆ ಈ ಸಿನಿಮಾ ಕೈ ಹಿಡಿಯಲಿದೆ ಎಂದು ಅಂದಾಜಿಸಲಾಗಿದೆ.

ಒಂದು ಕಡೆ ಸಿನಿಮಾವನ್ನು ರಿಲೀಸ್ ಮಾಡಲು ದೇಶಾದ್ಯಂತ ಸರ್ವಸಿದ್ದತೆ ನಡೆಸಿದ್ದರೆ, ಮತ್ತೊಂದು ಕಡೆ ಚಿತ್ರದ ಟೈಟಲ್ ತಂಡಕ್ಕೆ ಸಂಕಷ್ಟ ತಂದಿದೆ ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ಮಲಯಾಳಂ ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ.

ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ ಜೈಲರ್ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರದಿತ್ತು.

ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಮೊದಲು ಜೈಲರ್ ಹೆಸರಿನಲ್ಲಿ ತಾವು ಸಿನಿಮಾ ಮಾಡಿದ್ದರಿಂದ ಮತ್ತು ಮಲಯಾಳಂನಲ್ಲಿ ತಮಗೆ ರಜನಿ ಸಿನಿಮಾದಿಂದ ತೊಂದರೆ ಆಗುವುದರಿಂದ, ಟೈಟಲ್ ಬದಲಾಯಿಸುವಂತೆ ಅವರು ಕೋರ್ಟ್ ಗೆ ಮೊರೆ ಹೋಗಿದ್ದಾರೆ.

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಜೈಲರ್‌ ಕೂಡ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.

ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ.

ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು‌ ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ.

lokesh

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago