ಸ್ಯಾಂಡಲ್‌ವುಡ್ ಡೈರೆಕ್ಟರ್ ಕಮ್ ನಟ ರಿಷಬ್ ಶೆಟ್ಟಿ ಕಾಂತಾರಾ ಸಿನಿಮಾ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಕಾಂತಾರ ಸಿನಿಮಾ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾಗಿದೆ ಆದರೆ ಚಿತ್ರಕಥೆ ಮತ್ತು ಮೇಕಿಂಗ್‌ನಿಂದ ಪರ ಭಾಷಯವರು ಕೂಡ ಸಿನಿಮಾ ನೋಡುತ್ತಿದ್ದಾರೆ. ಹೀಗಾಗಿ ಒಂದು ಶೋ ಟಿಕೆಟ್ ಸಿಗುವುದು ಕೂಡ ಕಷ್ಟವಾಗಿದೆ ಎನ್ನಬಹುದು. ಈ ಸಂಭ್ರಮದಲ್ಲಿರುವ ಶೆಟ್ರು ಫ್ಯಾಮಿಲಿ ಅಭಿಮಾನಿಗಳ ಜೊತೆ ಮತ್ತೊಂದು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.
ಹೌದು! ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಮಾರ್ಚ್ 4ರಂದು ಹೆಣ್ಣು ಮಗುವನ್ನು ಬರ ಮಾಡಿಕೊಂಡರು. ‘ಇಷ್ಟೇ ಚೆಂದದ ಮಗಳು ಹುಟ್ಟಿದ್ದಾಳೆ. ತಾಯಿ ಮಗಳು ಆರೋಗ್ಯವಾಗಿದ್ದಾರೆ’ ಎಂದು ಬರೆದುಕೊಂಡಿದ್ದರು. ಆದರೆ ಫೋಟೋ ಮತ್ತು ಹೆಸರು ರಿವೀಲ್ ಮಾಡಿರಲಿಲ್ಲ. ಕಾಂತಾರ ಯಶಸ್ಸಿನಲ್ಲಿರುವ ರಿಷಬ್ ಶೆಟ್ಟಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ರಿವೀಲ್ ಮಾಡಿದ್ದಾರೆ.
‘ಎಲ್ಲರಿಗೂ ನವರಾತ್ರಿಯ ಶುಭಾಶಯಗಳು. ನಾಡಹಬ್ಬಕ್ಕೆ ಕಾಂತಾರದ ಯಶಸ್ಸು, ನಾಡಿನ ಜನರ ಪ್ರೀತಿ ಮತ್ತಷ್ಟು ಸಂಭ್ರಮವನ್ನು ತಂದಿವೆ. ಇದಕ್ಕೆ ಕಲಶಪ್ರಾಯವಾಗಿ, ಮಗಳು ರಾಧ್ಯಾಳ ಮುಗ್ಧ ನಗುವೂ ಜೊತೆಯಾಗಿದೆ.. ನಿಮ್ಮೆಲ್ಲರ ಹಾರೈಕೆಗಳಿರಲಿ’ ಎಂದು ಬರೆದುಕೊಂಡಿದ್ದಾರೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…