ಗದಗ: ಇಂದು (ಜನವರಿ ೮) ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನವಾಗಿದೆ. ಯಶ್ ಹುಟ್ಟು ಹಬ್ಬದ ಪ್ರಯುಕ್ತ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಸಾವಿಗೀಡಾಗಿದ್ದು, ಯಶ್ ಜನ್ಮದಿನದಂದೇ ಆ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.
ಈ ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನರು ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಅವರ ಗ್ರಾಮದಲ್ಲಿ ಸಾಮೂಹಿಕವಾಗಿ ನೆರವೇರಿಸಲಾಯಿತು.
ಮೃತರ ಕುಟುಂಬದವರು ಬಡವರಾಗಿದ್ದು, ಕೂಲಿಯಿಂದ ಜೀವನ ಸಾಗಿಸುತ್ತಿದ್ದರು. ಈ ಬಗ್ಗೆ ವಿಷಾಧ ವ್ಯಕ್ತಪಡಿಸಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಷ್.ಕೆ ಪಾಟೀಲ್ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಮತ್ತು ಗಾಯಾಳುಗಳಿಗೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…