ಚಿತ್ರ ಮಂಜರಿ

ಡಿಸೆಂಬರ್ 9ಕ್ಕೆ ಹಿಂದಿ ವರ್ಷನ್ ಒಟಿಟಿಯಲ್ಲಿ `ಕಾಂತಾರ’

ಚಿತ್ರರಂಗದಲ್ಲಿ ಹಿಸ್ಟರಿ ಕ್ರಿಯೆಟ್ ಮಾಡಿರುವ ಸಿನಿಮಾ `ಕಾಂತಾರ’ ಇದೀಗ ಹಿಂದಿ ವರ್ಷನ್ ಒಟಿಟಿಯಲ್ಲಿ ತೆರೆಗೆ ಅಪ್ಪಳಿಸಲು ರೆಡಿಯಾಗಿದೆ. ಬಾಲಿವುಡ್‌ನ ಗೆಲ್ಲಾಪೆಟ್ಟಿಗೆಯಲ್ಲಿ ಗೆದ್ದಿರುವ ಸಿನಿಮಾ, ಒಟಿಟಿಯ ಹಿಂದಿ ವರ್ಷನ್‌ನಲ್ಲಿ `ಕಾಂತಾರ’ ಬರಲಿದೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ `ಕಾಂತಾರ’ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸಿದ ಬಳಿಕ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು ಮತ್ತು ಮಲಯಾಳಂ ವರ್ಷನ್‌ನಲ್ಲಿ `ಕಾಂತಾರ’ ಅಮೆಜಾನ್ ಪ್ರೈಮ್‌ನಲ್ಲಿ ಈಗಾಗಲೇ ರಿಲೀಸ್ ಆಗಿದೆ. ಚಿತ್ರಮಂದಿರದ ಬಳಿಕ ಒಟಿಟಿಯಲ್ಲೂ `ಕಾಂತಾರ’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಹಿಂದಿ ವರ್ಷನ್ ಒಟಿಟಿಗೆ ರಿಲೀಸ್ ಯಾವಾಗ ಎಂದು ಹಿಂದಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದರು. ಅದಕ್ಕೀಗ ಉತ್ತರ ಸಿಕ್ಕಿದೆ.

ಇದೀಗ ರಿಷಬ್ ಶೆಟ್ಟಿ ಹಿಂದಿ ವರ್ಷನ್ ರಿಲೀಸ್ ಡೇಟ್ ಮತ್ತು ಯಾವ ಒಟಿಟಿ ಪ್ಲಾಟ್‌ಪಾರ್ಮ್ ಎಂದು ಬಹಿರಂಗ ಪಡಿಸಿದರು. ಅಂದಹಾಗೆ ಹಿಂದಿ ವರ್ಷನ್ ʻಕಾಂತಾರʼ ಒಟಿಟಿಗಳ ದೈತ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ನೆಟ್‌ಫ್ಲಿಕ್ಸ್ `ಕಾಂತಾರ’ ಸ್ಟ್ರೀಮಿಂಗ್ ಬಗ್ಗೆ ರಿಷಬ್ ಶೆಟ್ಟಿ ದಿನಾಂಕ ಬಹಿರಂಗಪಡಿಸಿದರು. `ಕಾಂತಾರ’ ಹಿಂದಿ ವರ್ಷನ್ ಒಟಿಟಿಯಲ್ಲಿ ಡಿಸೆಂಬರ್ 9ಕ್ಕೆ ತೆರೆಗೆ ಬರಲಿದೆ.

ಈಗಾಗಲೇ ಕೋಟಿ ಕೋಟಿ ಲೂಟಿ ಮಾಡಿರುವ ʻಕಾಂತಾರʼ ಸಿನಿಮಾ ಹಿಂದಿ ವರ್ಷನ್‌ನಲ್ಲಿ ಗೆಲ್ಲಲು ಬರುತ್ತಿದೆ.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

5 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

6 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

6 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

6 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

7 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

7 hours ago