ನವದೆಹಲಿ : ಬಾದಷಾ ಶಾರುಖ್ ನಟನೆಯ `ಪಠಾಣ್’ ಮುಂದಿನ ಜನವರಿಗೆ ತೆರೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ರಿಲೀಸ್‌ಗೂ ಮುನ್ನವೇ ಸಾಕಷ್ಟು ವಿವಾದಗಳನ್ನ ಹುಟ್ಟು ಹಾಕಿದೆ. ಇನ್ನೂ ದೀಪಿಕಾ ಕೇಸರಿ ಬಿಕಿನಿ ವಿವಾದ, ಸಿನಿಮಾ ಬ್ಯಾನ್ ವಿಷ್ಯವಾಗಿ ದಾದಾ ಫಾಲ್ಕೆ ಪುರಸ್ಕೃತ ನಟಿ ಆಶಾ ಪರೇಖ್ ಮಾತನಾಡಿದ್ದಾರೆ.
ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಕೇಸರಿ ಬಿಕಿನಿ ವಿವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. `ಪಠಾಣ್’ ಚಿತ್ರದ ಹಾಡಿನಲ್ಲಿ ನಟಿ ದೀಪಿಕಾ ಸಖತ್ ಹಾಟ್ ಆಗಿ ಮೈಚಳಿ ಬಿಟ್ಟು ಶಾರುಖ್ ಜೊತೆ ಸೊಂಟ ಬಳುಕಿಸಿದ್ದಾರೆ. ʻಬೇಷರಂ ರಂಗ್ʼ ಹಾಡಿನಲ್ಲಿ ದೀಪಿಕಾ ಧರಿಸಿರುವ ಕೇಸರಿ ಬಣ್ಣದ ಬಟ್ಟೆ ಕುರಿತಾಗಿ ಈ ಚಿತ್ರವನ್ನೇ ನಿಷೇಧಿಸಬೇಕು ಎಂಬ ಕೆಲ ಮಾತುಗಳು ಸಹ ಕೇಳಿ ಬಂದಿದ್ದವು. ಸದ್ಯ ಇದೇ ವಿಚಾರವಾಗಿ ಹಿರಿಯ ನಟಿ ಆಶಾ ಪರೇಖ್ ಮಾತನಾಡಿದ್ದಾರೆ. ಪಠಾಣ್ ಪರ ಹಿರಿಯ ನಟಿ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ.
ನಟಿ ಆಶಾ ಪರೇಖ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ `ಬೇಷರಂ ರಂಗ್’ ಹಾಡಿನ ಕುರಿತಾಗಿ ಕೇಳಲಾಗಿದೆ. ಈ ಬಗ್ಗೆ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರದ ಮೂಲ ಉದ್ದೇಶ ಮನರಂಜನೆ ನೀಡುವುದಾಗಿದೆ. ದೀಪಿಕಾ ಕೇಸರಿ ಬಣ್ಣದ ಬಟ್ಟೆ ಧರಿಸಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್ ಮಾಡಿ ಅನ್ನೋದು ಸರಿಯಲ್ಲ. ದೀಪಿಕಾ ಬಿಕಿನಿ ಧರಿಸಿರೋದು ಅವರ ಸಮಸ್ಯೆಯಲ್ಲ. ಕೇಸರಿ ಬಣ್ಣ ಇರೋದು ಹಲವರ ಸಮಸ್ಯೆ. ನಮ್ಮ ಯೋಚನೆ ಸಂಕುಚಿತ ಸ್ವಭಾವದಿಂದ ಇದೆ. ನಾವು ಯೋಚಿಸುವ ರೀತಿ ಬದಲಾಗಬೇಕಿದೆ. ಈ ಮೂಲಕ ಬಾಲಿವುಡ್‌ನ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ನಟಿ ಆಶಾ ಮಾತನಾಡಿದ್ದಾರೆ. ಕೆಲ ಚಿತ್ರಗಳು ಹೇಳಿಕೊಳ್ಳುವಂತಹ ದಾಖಲೆ ಮಾಡುತ್ತಿಲ್ಲ. ಹಾಗಾಗಿ ಹಿಂದಿ ಚಿತ್ರರಂಗ ಸೋಲುತ್ತಿದೆ ಎಂದಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…