ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಬಳಸಿ ತಯಾರಿಸಿದ್ದ ಈ ವಿಡಿಯೊ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ವಿವಿಧ ಕ್ಷೇತ್ರಗಳ ಗಣ್ಯರು ಹೇಳಿಕೆ ನೀಡಿದ್ದರು.
ಸರ್ಕಾರ ಸಹ ಈ ವಿಡಿಯೊ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಈ ಪ್ರಕರಣದ ಜಾಡು ಹಿಡಿದು ತೆರಳಿದ್ದ ತಂಡ ಕೆಲ ದಿನಗಳ ಹಿಂದಷ್ಟೇ ಈ ವಿಡಿಯೊ ಲಿಂಕ್ ಹಂಚಿಕೊಂಡಿದ್ದ ನಾಲ್ವರನ್ನು ಬಂಧಿಸಿತ್ತು. ಆದರೆ ವಿಡಿಯೊನ ಕರ್ತೃ ಸಿಕ್ಕಿರಲಿಲ್ಲ. ಇದೀಗ ದೆಹಲಿ ಪೊಲೀಸರು ಈ ವಿಡಿಯೊ ತಯಾರಿಸಿದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೈದರಾಬಾದ್‌ನ ವ್ಯಕ್ತಿಯ ಬಂಧನವಾಗಿದೆ, ಆತನನ್ನು ದೆಹಲಿಗೆ ಕರೆತರಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಆತನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.