ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಧೋನಿ ಈಗ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ಧೋನಿ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಧೋನಿ ಕೊಂಚ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಸೆಕೆಂಡ್ ಇನಿಂಗ್ಸ್ ಪ್ರಾರಂಭಿಸಿದ್ದಾರೆ. ಧೋನಿ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಶುರು ಮಾಡುವ ಮೂಲಕ ಇನ್ಮಂದೆ ನಿರ್ಮಾಪಕರಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಧೋನಿ ಎಂಟರ್‌ಟೈನ್‌ಮೆಂಟ್ ಕಂಪೆನಿಯು ಆರಂಭದಲ್ಲಿ ಕೇವಲ ಮೂರು ಭಾಷೆಗಳಲ್ಲಿ ಮಾತ್ರ ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದೆ.
ಧೋನಿ ಸಿನಿಮಾ ಸಂಸಸ್ಥೆಯ ಮೊದಲ ಆದ್ಯತೆ ತಮಿಳು ಸಿನಿಮಾ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿಗೆ ತಮಿಳುನಾಡು ಹಾಗೂ ಅಲ್ಲಿನ ಜನತೆ ಮೇಲೆ ಅಪಾರ ಪ್ರೀತಿ ಗೌರವ. ಅಲ್ಲದೇ ಅಲ್ಲಿ ಧೋನಿಗೆ ಅಪಾರ ಅಭಿಮಾನಿಗಳಿದ್ದಾರೆ. ಹೀಗಾಗಿ ಕಾಲಿವುಡ್ ಮೂಲಕವೇ ಧೋನಿ ಸಿನಿಮಾ ಕೆಲಸ ಆರಂಭಿಸಲಿದ್ದಾರೆ. ಇದಲ್ಲದೆ ಈ ಸಂಸ್ಥೆ ತೆಲುಗು ಹಾಗೂ ಮಲಯಾಳಂ ಚಿತ್ರಗಳನ್ನೂ ಕೂಡ ನಿರ್ಮಿಸಲಿದೆ. ಅಂದರೆ ಆರಂಭದಲ್ಲಿ ದಕ್ಷಿಣ ಭಾರತದ ಮೂರು ಭಾಷೆಗಳಲ್ಲಿ ಸಿನಿಮಾ ನಿರ್ಮಿಸಲು ಧೋನಿ ಎಂಟರ್‌ಟೈನ್‌ಮೆಂಟ್ ಕಂಪೆನಿ ಮುಂದಾಗಿದೆ.
ಧೋನಿ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಹೌಸ್ ಎಂಎಸ್ ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಇಬ್ಬರ ಒಡೆತನದಲ್ಲಿದೆ. ಈ ಪ್ರೊಡಕ್ಷನ್ ಹೌಸ್ ಬೇರೆ ನಿರ್ಮಾಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ರೋರ್ ಆಫ್ ದಿ ಲಯನ್, ಬ್ಲೇಜ್ ಟು ಗ್ಲೋರಿ ಮತ್ತು ದಿ ಹಿಡನ್ ಹಿಂದೂ ವೆಬ್ ಸಿರೀಸ್ಗಳನ್ನು ನಿರ್ಮಿಸಿದೆ. ಚಿಕ್ಕ ಬಜೆಟ್ ಸಿನಿಮಾಗಳನ್ನು ಮಾಡುತ್ತಿರುವ ಧೋನಿ ಎಂಟರ್ ಟೈನ್ ಮೆಂಟ್ ಇದೀಗ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಯಾಗಿ ದೊಡ್ಡ ಸಿನಿಮಾಗಳನ್ನು ಮಾಡಲು ಮುಂದಾಗಿದೆ.
ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಬಳಿಕ ಧೋನಿ ಕಡಕ್ನಾತ್ ಕೋಳಿ ಸಾಕಾಣಿಯ ಮೂಲಕ ಗಮನ ಸೆಳೆದಿದ್ದರು. ಇದೀಗ ಬಣ್ಣದ ಲೋಕದತ್ತ ಹೆಜ್ಜೆ ಹಾಕಿದ್ದಾರೆ. ಸದ್ಯ ಐಪಿಎಲ್ನಲ್ಲಿ ಮಾತ್ರ ಸಕ್ರೀಯರಾಗಿರುವ ಧೋನಿ ಕ್ರಿಕೆಟ್ ಜೊತೆಗೆ ಇತರೆ ಉದ್ಯಮ ಕ್ಷೇತ್ರದಲ್ಲೂ ತೊಡಗಿಸಿಕೊಳ್ಳುವ ಮೂಲಕ ಅನೇಕ ಯುವರಿಗೆ ಸ್ಪೂರ್ತಿಯಾಗಿದ್ದಾರೆ.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…