ಚಿತ್ರ ಮಂಜರಿ

ಫೋಟೋಗಳಿಂದ ಅಷ್ಟೊಂದು ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿರಲಿಲ್ಲ : ರಣವೀರ್ ಸಿಂಗ್

ರಣವೀರ್ ಸಿಂಗ್ ಅವರ ಸಿನಿಮಾಗಳು ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ. ಆದರೆ, ಅವರು ವೈಯಕ್ತಿಕ ವಿಚಾರಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಅಪ್​ಲೋಡ್ ಮಾಡಿದ್ದ ಬೆತ್ತಲೆ ಫೋಟೋ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಣವೀರ್ ಸಿಂಗ್ ಅವರು ಮುಂಬೈ ಪೊಲೀಸರ ಎದುರು ಹೇಳಿಕೆ ನೀಡಿದ್ದಾರೆ. ಆ ಫೋಟೋಗಳಿಂದ ಅಷ್ಟೊಂದು ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿರಲಿಲ್ಲ ಎಂಬ ಮಾತನ್ನು ರಣವೀರ್ ಸಿಂಗ್ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಪ್ರತಿಷ್ಠಿತ ಪೇಪರ್ ಮ್ಯಾಗಜಿನ್​ಗಾಗಿ ರಣವೀರ್ ಸಿಂಗ್ ಬೆತ್ತಲೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ಇದು ಸಾಕಷ್ಟು ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಒಂದು ವರ್ಗದ ಜನರು ರಣವೀರ್ ಸಿಂಗ್ ಅವರನ್ನು ಹೊಗಳಿದರೆ ಮತ್ತೊಂದು ವರ್ಗದವರು ರಣವೀರ್ ಸಿಂಗ್ ಅವರನ್ನು ತೆಗಳಿದ್ದರು. ಈ ಸಂಬಂಧ ಕೇಸ್ ಕೂಡ ದಾಖಲಾಗಿತ್ತು. ಆ ಬಳಿಕ ರಣವೀರ್ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಲಾಯಿತು.

ಆಗಸ್ಟ್​ 22ರಂದು ರಣವೀರ್ ಸಿಂಗ್ ಅವರು ವಿಚಾರಣೆಗೆ ಹಾಜರಿ ಹಾಕಬೇಕಿತ್ತು. ಆದರೆ, ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇರುವುದರಿಂದ 10 ದಿನಗಳ ಹೆಚ್ಚಿನ ಕಾಲಾವಕಾಶ ಕೇಳಿದ್ದರು. ಸೋಮವಾರ (ಆಗಸ್ಟ್ 29) ರಣವೀರ್ ಸಿಂಗ್ ಅವರು ವಿಚಾರಣೆ ಎದುರಿಸಿದ್ದಾರೆ.

ಮುಂಜಾನೆ 7 ಗಂಟೆಗೆ ರಣವೀರ್ ಪೊಲೀಸ್ ಠಾಣೆಗೆ ತೆರಳಿದ್ದಾರೆ. 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ‘ನಾನು ವಿವಾದಾತ್ಮಕ ಫೋಟೋಗಳನ್ನು ಅಪ್​ಲೋಡ್ ಮಾಡಿಲ್ಲ. ಆ ಫೋಟೋಗಳು ಆ ರೀತಿಯ ಸಮಸ್ಯೆ ತರುತ್ತದೆ ಎಂದು ನಾನು ಯೋಚಿಸಿರಲಿಲ್ಲ’ ಎಂದು ರಣವೀರ್ ಸಿಂಗ್ ಅವರು ಪೊಲೀಸರ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ರಣವೀರ್​ಗೆ  ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ರಣವೀರ್ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಣವೀರ್ ಸಿಂಗ್ ‘ಸರ್ಕಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೂಜಾ ಹೆಗ್ಡೆ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರಕ್ಕೆ ನಾಯಕಿಯರು. ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲೂ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ.

andolana

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

9 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

9 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

9 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

9 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

9 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

10 hours ago