ಕನ್ನಡ ಚಿತ್ರರಂಗದ ನಿರ್ಮಾಪಕ ಭಾ ಮಾ ಹರೀಶ್ ಅವರ ತಾಯಿ ಪ್ರೇಮ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.
ಮೆಜೆಸ್ಟಿಕ್’ ಸೇರಿದಂತೆ ಹಲವು ಸಿನಿಮಾ ನಿರ್ಮಿಸಿರುವ ಭಾ ಮಾ ಹರೀಶ್ ಅವರ ತಾಯಿ ಪ್ರೇಮ(74) ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಸದ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಭಾ.ಮಾ ಹರೀಶ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು.
ಸಂದರ್ಭ ಪ್ರೇಮ ಅವರನ್ನ ಮಂಗಳವಾರ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಡಿಮೆ ರಕ್ತದ ಒತ್ತಡದಿಂದ ಆಸ್ಪತ್ರೆಯಲ್ಲಿ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಪ್ರೇಮ ಅವರು ಮಕ್ಕಳಾದ ಭಾ ಮಾ ಹರೀಶ್, ಭಾ ಮಾ ಗಿರೀಶ್, ದಿವಾಕರ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಬೆಂಗಳೂರಿನ ವಿಜಯನಗರದಲ್ಲಿರುವ ಭಾ ಮಾ ಹರೀಶ್ ಮನೆಯಲ್ಲಿ ಅವರ ತಾಯಿಯ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಾಳೆ ಕನಕಪುರ ಮುಖ್ಯ ರಸ್ತೆಯಲ್ಲಿರುವ ಸೋಮನಹಳ್ಳಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…