ಬೆಂಗಳೂರು : ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರಿಗೆ ರಾಜಕೀಯಕ್ಕೆ ಬರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಪಕ್ಕದಲ್ಲಿಯೇ ಕುಳಿತಿದ್ದ ನಟ ಶಿವರಾಜ್‌ಕುಮಾರ್ ಅವರೊಂದಿಗೆ ಚರ್ಚಿಸಿರುವ ಡಿ.ಕೆ ಶಿವಕುಮಾರ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಾಗುವಂತೆ ಸಲಹೆ ನೀಡಿದ್ದಾರೆ.
ಆರ್ಯ ಈಡಿಗ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಈ ವಿಷಯವನ್ನು ಪ್ರಸ್ತಾಪಿಸಿರುವ ಡಿ.ಕೆ ಶಿವಕುಮಾರ್ ಅವರು, ಮಿತ್ರ ಶಿವರಾಜ್ ಕುಮಾರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಾಗುವಂತೆ ಸಲಹೆ ನೀಡಿದ್ದೇನೆ. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಅವರಿಗೆ ಟಿಕೆಟ್ ನೀಡುತ್ತೇನೆ. ಆದರೆ ಈಗಾಗಲೇ ಐದಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇನೆ. ಅವುಗಳ ಚಿತ್ರೀಕರಣ ಮುಗಿಯಬೇಕು ಎನ್ನುತ್ತಿದ್ದಾರೆ. ಸಿನಿಮಾ ಚಿತ್ರೀಕರಣವನ್ನು ಯಾವಾಗ ಬೇಕಾದರೂ ಮುಗಿಸಬಹುದು ಆದರೆ ಲೋಕಸಭೆ ಚುನಾವಣೆ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಹೇಳಿದ್ದೇನೆ ಎಂದರು.
ಇನ್ನು ಆರ್ಯ ಈಡಿಗ ಸಮುದಾಯವನ್ನು ಕುರಿತು ಮಾತನಾಡಿದ ಡಿಕೆಶಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಆರ್ಯ ಈಡಿಗ ಸಮುದಾಯದ ಕೊಡುಗೆ ಬಹಳಾ ಇದೆ. ನಾವು ನಿಮ್ಮ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ. ನಿಮ್ಮ ಎಲ್ಲಾ ಬೇಡಿಕೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ. ಆರ್ಯ ಈಡಿಗ ಅಭಿವೃದ್ಧಿ ನಿಗಮಕ್ಕೆ ಅನುದಾನ ಸೇರಿಸದಂತೆ ಎಲ್ಲಾ ಮನವಿಗಳೂ ಕೂಡ ನಮ್ಮ ಗಮನದಲ್ಲಿವೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಅನುದಾನ ಘೋಷಣೆ ಮಾಡುವಂತಿಲ್ಲ. ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಭರವಸೆ ನೀಡಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…