Mysore
21
broken clouds

Social Media

ಭಾನುವಾರ, 03 ನವೆಂಬರ್ 2024
Light
Dark

ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್‌ಗೆ ನೋಟಿಸ್‌ ಜಾರಿ

ಬೆಂಗಳೂರು : ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಆರ್‌ಆರ್‌ ನಗರ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನೋಟಿಸ್‌ನಲ್ಲಿ ಮೂರ ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ ನಾಯಿ ಕೇರ್‌ ಟೇಕರ್‌ ಹೇಮಂತ್‌ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ನಟ ದರ್ಶನ್‌ಗೆ ನೋಟಿಸ್‌ ನೀಡಿದ್ದಾರೆ.

ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

ದೂರುದಾರ ಅಮಿತಾ ಜಿಂದಾಲ್ ಅವರು, ಕಳೆದ ಅಕ್ಟೋಬರ್ 28 ರಂದು ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ನಟ ದರ್ಶನ್ ಅವರ ಮನೆಯ ಎದುರಿನ ಖಾಲಿ ಸ್ಥಳದಲ್ಲಿದ್ದ ತಮ್ಮ ಕಾರು ನಿಲ್ಲಿಸಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾರು ತೆಗೆಯಲು ಬಂದಾಗ ಮೂರು ನಾಯಿಗಳ ಪೈಕಿ ಒಂದು ನಾಯಿ ಎರಗಿತ್ತು, ಎರಡನ್ನು ಕಟ್ಟಲಾಗಿತ್ತು ಎಂದು ದೂರು ನೀಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ