ಬೆಂಗಳೂರು : ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಆರ್‌ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್‌ನಲ್ಲಿ ಮೂರ ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ನಾಯಿ ಕೇರ್ ಟೇಕರ್ ಹೇಮಂತ್ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ನಟ ದರ್ಶನ್‌ಗೆ ನೋಟಿಸ್ ನೀಡಿದ್ದಾರೆ.
ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.
ದೂರುದಾರ ಅಮಿತಾ ಜಿಂದಾಲ್ ಅವರು, ಕಳೆದ ಅಕ್ಟೋಬರ್ 28 ರಂದು ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ನಟ ದರ್ಶನ್ ಅವರ ಮನೆಯ ಎದುರಿನ ಖಾಲಿ ಸ್ಥಳದಲ್ಲಿದ್ದ ತಮ್ಮ ಕಾರು ನಿಲ್ಲಿಸಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾರು ತೆಗೆಯಲು ಬಂದಾಗ ಮೂರು ನಾಯಿಗಳ ಪೈಕಿ ಒಂದು ನಾಯಿ ಎರಗಿತ್ತು, ಎರಡನ್ನು ಕಟ್ಟಲಾಗಿತ್ತು ಎಂದು ದೂರು ನೀಡಿದ್ದರು.
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…