ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದೂರು ನೀಡಿದ್ದು ಸಾಕಷ್ಟು ಚರ್ಚೆಯಾಗಿತ್ತು. ಉದ್ದೇಶ ಪೂರ್ವಕವಾಗಿ ನಾಯಿಯನ್ನು ನನ್ನ ಮೇಲೆ ಛೂ ಬಿಡಲಾಗಿದೆ ಎಂದು ಮಹಿಳೆ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಇಲ್ಲದೇ ಇರುವುದು ತನಿಖೆಯಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ, ದೋಷಾರೋಪ ಪಟ್ಟಿಯಲ್ಲಿ ನಟನ ಹೆಸರು ಸೇರಿಸದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ.
ದರ್ಶನ್ ಹಾಗು ಕೇರ್ ಟೇಕರ್ ವಿರುದ್ಧ ನಾಯಿ ಛೂ ಬಿಟ್ಟು ಕಚ್ಚಿಸಿದ್ದಾರೆಂದು ಅಮಿತಾ ದೂರಿನಲ್ಲಿ ಹೇಳಿದ್ದರು. A-2 ಆರೋಪಿಯಾಗಿ ದರ್ಶನ್ ಹೆಸರನ್ನು ಸಹಾ ಉಲ್ಲೇಖಿಸಿದ್ದರು. ಆದರೆ, ಘಟನೆ ನಡೆದಾಗ ನಟ ದರ್ಶನ್ ಸ್ಥಳದಲ್ಲೇ ಇರಲಿಲ್ಲ. ನಟ ದರ್ಶನ್ಗೆ ಘಟನೆಯ ಬಗ್ಗೆ ಮಾಹಿತಿಯೇ ಇರಲಿಲ್ಲ ಎಂದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್ ಹೆಸರು ಕೈ ಬಿಟ್ಟು ಚಾರ್ಚ್ ಶೀಟ್ ಸಲ್ಲಿಸಲು ರಾಜರಾಜೇಶ್ವರಿ ನಗರ ಪೊಲೀಸರು ಮುಂದಾಗಿದ್ದಾರೆ.
ಏನಿದು ಪ್ರಕರಣ? : ದರ್ಶನ್ ಅವರು ಸಾಕಿದ್ದ ಶ್ವಾನಗಳು ಅಮಿತಾ ಜಿಂದಾಲ್ ಎಂಬ ಮಹಿಳೆ ಮೇಲೆ ದಾಳಿ ಮಾಡಿ ಕಚ್ಚಿತ್ತು. ಆದರೆ, ಈ ವೇಳೆ ದರ್ಶನ್ ಮನೆಯಲ್ಲಿ ಇರಲಿಲ್ಲ. ಈ ಸಂಬಂಧ ಅಮಿತಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ‘ಉದ್ದೇಶಪೂರ್ವಕವಾಗಿ ಈ ಕೆಲಸ ಮಾಡಲಾಗಿದೆ’ ಎಂದು ಮಹಿಳೆ ದೂರಿದ್ದರು. ದರ್ಶನ್ ಕೂಡ ವಿಚಾರಣೆಗೆ ಹಾಜರಿ ಹಾಕಿದ್ದರು. ‘ಪ್ರಕರಣ ನಡೆಯೋ ಸಂದರ್ಭದಲ್ಲಿ ನಾನು ಇರಲಿಲ್ಲ. ಇನ್ನು ಹೀಗೆ ಆಗದಂತೆ ನೋಡಿಕೊಳ್ಳುವೆ’ ಎಂದು ಅವರು ತಿಳಿಸಿದ್ದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…