ಚಿತ್ರ ಮಂಜರಿ

ಯೋಗಿ ಅಭಿನಯದ‌ ರೋಜಿ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ಡಾಲಿ

ಬೆಂಗಳೂರು : ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ.ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ನಡೆಯಿತು. ಡಾಲಿ ಧನಂಜಯ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ, ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.” ಹೆಡ್ ಬುಷ್” ಚಿತ್ರದ ನಂತರ ಶೂನ್ಯ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಡಿ.ವೈ.ರಾಜೇಶ್ ಹಾಗೂ ಡಿ.ವೈ.ವಿನೋದ್ ನಿರ್ಮಾಣ ಮಾಡುತ್ತಿದ್ದಾರೆ.
ಯೋಗಿ ನನ್ನ ಆತ್ಮೀಯ ಗೆಳೆಯ. “ರೋಜಿ” ಯೋಗಿ ಅಭಿನಯದ 50ನೇ ಸಿನಿಮಾ ಎಂದು ತಿಳಿದು ಸಂತೋಷವಾಯಿತು. ಶೂನ್ಯ ಕೂಡ ನಮ್ಮ ಸಂಸ್ಥೆಯ ನಿರ್ಮಾಣದ “ಹೆಡ್ ಬುಷ್” ಚಿತ್ರ ನಿರ್ದೇಶನ ಮಾಡಿದ್ದರು. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಡಾಲಿ ಹಾರೈಸಿದರು.

ಇದು ನನ್ನ ಐವತ್ತನೇ ಚಿತ್ರ. ನಾನು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಎನ್ನಬಹುದು. ಶೂನ್ಯ ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ಶೀರ್ಷಿಕೆ ಬಿಡುಗಡೆ ಮಾಡಿ, ಶುಭ ಹಾರೈಸಿದ ಸ್ನೇಹಿತ ಡಾಲಿ ಧನಂಜಯ ಅವರಿಗೆ ಧನ್ಯವಾದ ಎಂದರು ನಾಯಕ ಯೋಗಿ.

ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ಎಲ್ಲರೂ ನೀಡಿದ್ದ ಪ್ರೋತ್ಸಾಹಕ್ಕೆ ಚಿರ ಋಣಿ. ಈಗ ನನ್ನ ನಿರ್ದೇಶನದ ಎರಡನೇ ಚಿತ್ರ “ರೋಜಿ” ಗೆ ಚಾಲನೆ ಸಿಕ್ಕಿದೆ. ಚಿತ್ರದಲ್ಲಿ ಯೋಗಿ ಅವರ ಹೆಸರೆ “ರೋಜಿ”. ಚಿತ್ರರಂಗದವರಿಗೆ ಚಿತ್ರಮಂದಿರ ದೇವಸ್ಥಾನವಿದಂತೆ. ಹಾಗಾಗಿ ನಮ್ಮ ಚಿತ್ರವನ್ನು ಚಿತ್ರಮಂದಿರದಲ್ಲಿ ಆರಂಭಿಸಿದ್ದೇವೆ. ಮೇ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶೂನ್ಯ ತಿಳಿಸಿದರು.

lokesh

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

28 mins ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

30 mins ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

32 mins ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

33 mins ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

37 mins ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

41 mins ago