ಬೆಂಗಳೂರು: ಚಂದನವನದ ನವರಸ ನಾಯಕ, ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರು. ಆಗಾಗ ಯಾವುದಾದರೂ ಒಂದು ವಿಷಯದ ಬಗ್ಗೆ, ತಮ್ಮ ಜೀವನದ ಅಪ್ಡೇಟ್ಸ್ ಬಗ್ಗೆ ಟ್ವಿಟರ್-ಫೇಸ್ಬುಕ್ಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಅವರು ಇತ್ತೀಚೆಗೆ ತಮ್ಮ ಕಾಲಿಗೆ ಪೆಟ್ಟಾದ ಬಗ್ಗೆಯೂ ಹೇಳಿಕೊಂಡಿದ್ದರು.
ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದ ಬಳಿಕ ಕಾಲಿನ ಫೋಟೋ ತೆಗೆದು ಸೋಷಿಯಲ್ ಮೀಡಿಯಾಗೆ ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದರು. ‘ಸಣ್ಣ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ! 6 ವಾರದ ದಿಘ್ಭಂಧನ ನಡಿಗೆಗೆ😭’ ಎಂಬುದಾಗಿ ಆ ಫೋಟೋ ಜತೆ ಕ್ಯಾಪ್ಷನ್ ಹಾಕಿಕೊಂಡಿದ್ದರು.
ಜಗ್ಗೇಶ್ ಅವರ ಈ ಪೋಸ್ಟ್ನಲ್ಲಿನ ತಪ್ಪನ್ನು ಗಮನಕ್ಕೆ ತರುವ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದಲ್ಲಿ ಮೇಷ್ಟ್ರು ಎಂದೇ ಕರೆಯಲಾಗುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಕಮೆಂಟ್ ಮಾಡಿದ್ದಾರೆ. ‘ದಿಘ್ಭಂದನ ಅಲ್ಲ -ದಿಗ್ಬಂಧನ. ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ. ಮೂಳೆ ಮುರಿತ ಬೇಗ ಗುಣವಾಗಲಿ. ಸಕ್ಕರೆ ರೋಗವಿದ್ದಲ್ಲಿ ಹೆಚ್ಚು ಜೋಪಾನ ವಹಿಸಿ. ಶುಭವಾಗಲಿ. ಪ್ರೀತಿಯಿಂದ- ನಾಗತಿಹಳ್ಳಿ ಚಂದ್ರಶೇಖರ’ ಎಂಬುದಾಗಿ ಅವರು ಮಾಡಿರುವ ರಿಪ್ಲೈಗೆ ಬಹಳಷ್ಟು ಪ್ರತಿಕ್ರಿಯೆಗಳು ಬರಲಾರಂಭಿಸಿವೆ.
ಚಿತ್ರರಂಗದಲ್ಲಿ ಮೇಷ್ಟ್ರು ಎಂದೇ ಕರೆಯಲ್ಪಡುವ ನಾಗತಿಹಳ್ಳಿ ಚಂದ್ರಶೇಖರ್ ಅವರು, ಈ ಮೂಲಕ ನಿಜವಾಗಿಯೂ ಮೇಷ್ಟ್ರ ರೀತಿಯಲ್ಲಿ ಕನ್ನಡ ವ್ಯಾಕರಣದ ಕುರಿತು ಅರಿವು ಮೂಡಿಸುವ ಕೆಲಸ ಮಾಡಿದ್ದಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…