ಬೆಂಗಳೂರು: ಚಂದನವನದ ನವರಸ ನಾಯಕ, ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರು. ಆಗಾಗ ಯಾವುದಾದರೂ ಒಂದು ವಿಷಯದ ಬಗ್ಗೆ, ತಮ್ಮ ಜೀವನದ ಅಪ್ಡೇಟ್ಸ್ ಬಗ್ಗೆ ಟ್ವಿಟರ್-ಫೇಸ್ಬುಕ್ಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಅವರು ಇತ್ತೀಚೆಗೆ ತಮ್ಮ ಕಾಲಿಗೆ ಪೆಟ್ಟಾದ ಬಗ್ಗೆಯೂ ಹೇಳಿಕೊಂಡಿದ್ದರು.
ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದ ಬಳಿಕ ಕಾಲಿನ ಫೋಟೋ ತೆಗೆದು ಸೋಷಿಯಲ್ ಮೀಡಿಯಾಗೆ ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದರು. ‘ಸಣ್ಣ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ! 6 ವಾರದ ದಿಘ್ಭಂಧನ ನಡಿಗೆಗೆ?’ ಎಂಬುದಾಗಿ ಆ ಫೋಟೋ ಜತೆ ಕ್ಯಾಪ್ಷನ್ ಹಾಕಿಕೊಂಡಿದ್ದರು.
ಜಗ್ಗೇಶ್ ಅವರ ಈ ಪೋಸ್ಟ್ನಲ್ಲಿನ ತಪ್ಪನ್ನು ಗಮನಕ್ಕೆ ತರುವ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದಲ್ಲಿ ಮೇಷ್ಟ್ರು ಎಂದೇ ಕರೆಯಲಾಗುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಕಮೆಂಟ್ ಮಾಡಿದ್ದಾರೆ. ‘ದಿಘ್ಭಂದನ ಅಲ್ಲ -ದಿಗ್ಬಂಧನ. ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ. ಮೂಳೆ ಮುರಿತ ಬೇಗ ಗುಣವಾಗಲಿ. ಸಕ್ಕರೆ ರೋಗವಿದ್ದಲ್ಲಿ ಹೆಚ್ಚು ಜೋಪಾನ ವಹಿಸಿ. ಶುಭವಾಗಲಿ. ಪ್ರೀತಿಯಿಂದ- ನಾಗತಿಹಳ್ಳಿ ಚಂದ್ರಶೇಖರ’ ಎಂಬುದಾಗಿ ಅವರು ಮಾಡಿರುವ ರಿಪ್ಲೈಗೆ ಬಹಳಷ್ಟು ಪ್ರತಿಕ್ರಿಯೆಗಳು ಬರಲಾರಂಭಿಸಿವೆ.
ಚಿತ್ರರಂಗದಲ್ಲಿ ಮೇಷ್ಟ್ರು ಎಂದೇ ಕರೆಯಲ್ಪಡುವ ನಾಗತಿಹಳ್ಳಿ ಚಂದ್ರಶೇಖರ್ ಅವರು, ಈ ಮೂಲಕ ನಿಜವಾಗಿಯೂ ಮೇಷ್ಟ್ರ ರೀತಿಯಲ್ಲಿ ಕನ್ನಡ ವ್ಯಾಕರಣದ ಕುರಿತು ಅರಿವು ಮೂಡಿಸುವ ಕೆಲಸ ಮಾಡಿದ್ದಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…