Mysore
24
mist

Social Media

ಗುರುವಾರ, 12 ಡಿಸೆಂಬರ್ 2024
Light
Dark

ಹೆಬ್ಬುಲಿ ಕೇಶ ವಿನ್ಯಾಸ ಮಕ್ಕಳಿಗೆ ಬೇಡ: ಕ್ಷೌರಿಕರಿಗೆ ಪತ್ರ ಬರೆದ ಶಿಕ್ಷಕ

ಕೊಳ್ಳೇಗಾಲ : ಹೆಬ್ಬುಲಿ ಸಿನೆಮಾದಲ್ಲಿ ನಟ ಸುದೀಪ್‌ ಅವರು ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಎಂ.ಶಾಂತರಾಜು ಅವರು ತಾಲೂಕಿನ ಸವಿತಾ ಸಮಾಜದ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ʼʼತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ತಮ್ಮ ಸಂಘದ ಸದಸ್ಯರ ಕಟಿಂಗ್‌ ಶಾಪ್‌ಗಳಲ್ಲಿ ಶಾಲಾ ಮಕ್ಕಳು ಹೆಬ್ಬುಲಿ ಕಟಿಂಗ್‌ ಮಾಡಿಸಲು ಕೇಳಿದರೆ ದಯವಿಟ್ಟು ಮಾಡಬೇಡಿ. ನಾವು ತರಗತಿಯಲ್ಲಿ ಈ ರೀತಿ ಕಟಿಂಗ್‌ ಮಾಡಿಸಬೇಡಿ ಎಂದು ತಿಳಿಸಿದ್ದರೂ, ಅಲ್ಲದೇ ಪೋಷಕರಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ.

ವಿದ್ಯಾರ್ಥಿಗಳು ಈ ರೀತಿ ಕಟಿಂಗ್‌ ಮಾಡಿಸಿಕೊಂಡು ಬರುವುದು ನಮ್ಮನ್ನು ಅಪಹಾಸ್ಯ ಮಾಡುವಂತಿದೆ. ಅಣಕಿಸುವಂತಿದೆ. ಆದ್ದರಿಂದ ಈ ಬಗ್ಗೆ ತಮ್ಮ ಸಂಘದ ಸದಸ್ಯರು ಹೆಬ್ಬುಲಿ ಕಟಿಂಗ್‌ ಮಾಡಬಾರದಾಗಿ ಆದೇಶ ನೀಡವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆʼʼ ಎಂದು ಪತ್ರದಲ್ಲಿ ಮನವಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ