ಕೊಳ್ಳೇಗಾಲ : ಹೆಬ್ಬುಲಿ ಸಿನೆಮಾದಲ್ಲಿ ನಟ ಸುದೀಪ್ ಅವರು ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಎಂ.ಶಾಂತರಾಜು ಅವರು ತಾಲೂಕಿನ ಸವಿತಾ ಸಮಾಜದ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ʼʼತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ತಮ್ಮ ಸಂಘದ ಸದಸ್ಯರ ಕಟಿಂಗ್ ಶಾಪ್‌ಗಳಲ್ಲಿ ಶಾಲಾ ಮಕ್ಕಳು ಹೆಬ್ಬುಲಿ ಕಟಿಂಗ್ ಮಾಡಿಸಲು ಕೇಳಿದರೆ ದಯವಿಟ್ಟು ಮಾಡಬೇಡಿ. ನಾವು ತರಗತಿಯಲ್ಲಿ ಈ ರೀತಿ ಕಟಿಂಗ್ ಮಾಡಿಸಬೇಡಿ ಎಂದು ತಿಳಿಸಿದ್ದರೂ, ಅಲ್ಲದೇ ಪೋಷಕರಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ.
ವಿದ್ಯಾರ್ಥಿಗಳು ಈ ರೀತಿ ಕಟಿಂಗ್ ಮಾಡಿಸಿಕೊಂಡು ಬರುವುದು ನಮ್ಮನ್ನು ಅಪಹಾಸ್ಯ ಮಾಡುವಂತಿದೆ. ಅಣಕಿಸುವಂತಿದೆ. ಆದ್ದರಿಂದ ಈ ಬಗ್ಗೆ ತಮ್ಮ ಸಂಘದ ಸದಸ್ಯರು ಹೆಬ್ಬುಲಿ ಕಟಿಂಗ್ ಮಾಡಬಾರದಾಗಿ ಆದೇಶ ನೀಡವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆʼʼ ಎಂದು ಪತ್ರದಲ್ಲಿ ಮನವಿ ತಿಳಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರ, ತಮ್ಮ ವರಿಷ್ಠರನ್ನು ಮೆರೆಸಲು ಗುಲಾಮರಂತೆ ನಡೆದುಕೊಂಡು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡಿ ಬೆಳಗಾವಿ ಅಧಿವೇಶನ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ, ಈಗಿನ ನಕಲಿ ಗಾಂಧಿ ಕುಟುಂಬಕ್ಕಾಗಿ ಮತ್ತು ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ…
ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ಸೂಚಿಸಿರುವುದಕ್ಕೆ,…
ಮಂಡ್ಯ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರ ಕಷ್ಟ- ಸುಖಗಳಿಗೆ ಸ್ಪಂದಿಸುವ ಮೂಲಕ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು…
ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಬಿಜೆಪಿ ನಗರ ಜಿಲ್ಲಾಧ್ಯಕ್ಷ…
ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು…