ಬೆಂಗಳೂರು: ಅಭಿನಯಾ ಅವರು ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಾ ಲೇಔಟ್ ಪೊಲೀಸರು ಲುಕ್ಔಟ್ ನೋಟೀಸ್ ಜಾರಿ ಮಾಡಿದ್ದರು. ಆದರೆ ಈಗ ಅಭಿನಯಾಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಸಿಕ್ಕಿದೆ.
ನಟಿ ಅಭಿನಯಾ ವರದಕ್ಷಿಣೆ ಕೇಸ್ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ (Abhinaya) ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ನಲ್ಲಿ ಅವರಿಗೆ ಜಾಮೀನು ದೊರೆತಿದೆ. ಅಭಿನಯಾ ಜೊತೆಗೆ ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಕೂಡ ಜಾಮೀನು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಮೂವರು ನಿಟ್ಟುಸಿರು ಬಿಡುವಂತಾಗಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ (Dowry Case) ಅಭಿನಯಾ ಅವರಿಗೆ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಹೈಕೋರ್ಟ್ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.
ತಲೆ ಮರೆಸಿಕೊಂಡಿದ್ದ ಅಭಿನಯಾ:
ಅತ್ತಿಗೆ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಅಭಿನಯಾ ಹಾಗೂ ಅವರ ತಾಯಿ ಮತ್ತು ಸಹೋದರನಿಗೆ ಹೈಕೋರ್ಟ್ ಜೈಲು ಶಿಕ್ಷೆ ನೀಡಿತ್ತು. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡರು. ಬಳಿಕ ಚಂದ್ರಾ ಲೇಔಟ್ ಪೊಲೀಸರು ಲುಕ್ಔಟ್ ನೋಟೀಸ್ ಜಾರಿ ಮಾಡಿದರು. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿರುವ ಕರಪತ್ರ/ಪೋಸ್ಟರ್ ವೈರಲ್ ಆಗಿದೆ. ಅದರ ಬೆನ್ನಲ್ಲೇ ಅಭಿನಯಾ ಕುಟುಂಬದವರು ಸುಪ್ರೀಂ ಕೋರ್ಟ್ ಮೊರೆ ಹೋದರು.
ಅಭಿನಯಾ ಕೇಸ್ ವಿಚಾರಣೆ ಮುಂದೂಡಿಕೆ:
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಅವರು 2002ರಲ್ಲಿ ವರದಕ್ಷಿಣೆ ಕೇಸ್ ದಾಖಲಿಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ 2022ರ ಡಿಸೆಂಬರ್ನಲ್ಲಿ ಹೈಕೋರ್ಟ್ ತೀರ್ಪು ನೀಡಿತು. ಆದರೆ ಅದನ್ನು ಪ್ರಶ್ನಿಸಿ ಅಭಿನಯಾ ಕುಟುಂಬದವರು ಈಗ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…