ಚಿತ್ರ ಮಂಜರಿ

ವರದಕ್ಷಿಣೆ ಕೇಸ್​ : ನಟಿ ಅಭಿನಯಾಗೆ ಜಾಮೀನು

ಬೆಂಗಳೂರು: ಅಭಿನಯಾ ಅವರು ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದ್ದರು. ಆದರೆ ಈಗ ಅಭಿನಯಾಗೆ ಸುಪ್ರೀಂ ಕೋರ್ಟ್​ನಿಂದ ಜಾಮೀನು ಸಿಕ್ಕಿದೆ.

ನಟಿ ಅಭಿನಯಾ ವರದಕ್ಷಿಣೆ ಕೇಸ್​ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ (Abhinaya) ಅವರಿಗೆ ಈಗ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಸುಪ್ರೀಂ ಕೋರ್ಟ್​ನಲ್ಲಿ ಅವರಿಗೆ ಜಾಮೀನು ದೊರೆತಿದೆ. ಅಭಿನಯಾ ಜೊತೆಗೆ ಅವರ ತಾಯಿ ಜಯಮ್ಮ ಮತ್ತು ಸಹೋದರ ಚೆಲುವರಾಜು ಕೂಡ ಜಾಮೀನು ಪಡೆದುಕೊಂಡಿದ್ದಾರೆ. ಸದ್ಯಕ್ಕೆ ಈ ಮೂವರು ನಿಟ್ಟುಸಿರು ಬಿಡುವಂತಾಗಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ (Dowry Case) ಅಭಿನಯಾ ಅವರಿಗೆ ಇತ್ತೀಚೆಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಹೈಕೋರ್ಟ್​ ನೀಡಿದ ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್​ (Supreme Court) ಮೊರೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾಮೀನು ಮಂಜೂರಾಗಿದೆ.

ತಲೆ ಮರೆಸಿಕೊಂಡಿದ್ದ ಅಭಿನಯಾ:
ಅತ್ತಿಗೆ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಅಭಿನಯಾ ಹಾಗೂ ಅವರ ತಾಯಿ ಮತ್ತು ಸಹೋದರನಿಗೆ ಹೈಕೋರ್ಟ್​ ಜೈಲು ಶಿಕ್ಷೆ ನೀಡಿತ್ತು. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡರು. ಬಳಿಕ ಚಂದ್ರಾ ಲೇಔಟ್​ ಪೊಲೀಸರು ಲುಕ್​ಔಟ್​ ನೋಟೀಸ್​ ಜಾರಿ ಮಾಡಿದರು. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿಕೊಂಡಿರುವ ಕರಪತ್ರ/ಪೋಸ್ಟರ್​ ವೈರಲ್​ ಆಗಿದೆ. ಅದರ ಬೆನ್ನಲ್ಲೇ ಅಭಿನಯಾ ಕುಟುಂಬದವರು ಸುಪ್ರೀಂ ಕೋರ್ಟ್​ ಮೊರೆ ಹೋದರು.

ಅಭಿನಯಾ ಕೇಸ್​ ವಿಚಾರಣೆ ಮುಂದೂಡಿಕೆ:
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಅವರು 2002ರಲ್ಲಿ ವರದಕ್ಷಿಣೆ ಕೇಸ್​ ದಾಖಲಿಸಿದ್ದರು. ಅದಕ್ಕೆ ಸಂಬಂಧಪಟ್ಟಂತೆ 2022ರ ಡಿಸೆಂಬರ್​ನಲ್ಲಿ ಹೈಕೋರ್ಟ್​ ತೀರ್ಪು ನೀಡಿತು. ಆದರೆ ಅದನ್ನು ಪ್ರಶ್ನಿಸಿ ಅಭಿನಯಾ ಕುಟುಂಬದವರು ಈಗ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ.

andolanait

Recent Posts

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

7 mins ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

19 mins ago

ಪುಸ್ತಕ ಮೇಳದಲ್ಲಿ ‘ಕವಿತೆ ಹೇಳಿ, ಗಿಡ ಪಡೆಯಿರಿ’

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…

32 mins ago

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

19 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

20 hours ago