ಮರ್ಕೆಚ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟ ರಣ್ವೀರ್ ಸಿಂಗ್ ಭಾಗಿಯಾಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ಎಟೊಯಿಲ್ ಡಿ’ಓರ್ ಪ್ರಶಸ್ತಿ ( Etoile d’Or award) ಪಡೆದಿದ್ದಾರೆ.
ಮಾಹಿತಿ ಪ್ರಕಾರ, ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ, ರಣ್ವೀರ್ ಸಿಂಗ್ ಅದ್ಭುತ ನೃತ್ಯ ಮಾಡಿದ್ದಾರೆ. ಬಳಿಕ ನಟನಿಗೆ ಮರ್ಕೆಚ್‌ನ ಎಟೊಯಿಲ್ ಡಿ’ಒರ್ ಟ್ರೋಫಿಯನ್ನು ನೀಡಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಅವರು, “ನಾನು ನನ್ನ ಸುತ್ತಲಿನ ಪ್ರಪಂಚವನ್ನು ನೋಡಿದಾಗ, ಅದು ಅತ್ಯಂತ ಕರಾಳ ಅವಧಿ ಎನಿಸಿತು. ನಾನು ಎಲ್ಲಾ ರೀತಿಯ ನೋವು ಮತ್ತು ಸಂಕಟಗಳನ್ನು ನೋಡಿದ್ದೇನೆ. ನನ್ನ ಸಾಮರ್ಥ್ಯದಲ್ಲಿ, ಮನೋರಂಜನಾಕಾರನಾಗಿ ನಾನು ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ಜನರ ಹೊರೆಯನ್ನು ಹಗುರಗೊಳಿಸುವುದು, ನಾನು ಆ ಕೆಲಸವನ್ನು ಮಾಡುತ್ತಿದ್ದೇನೆಂದು ನಂಬಿದ್ದೇನೆ” ಎಂದು ತಿಳಿಸಿದರು.ನಟ ರಣ್ವೀರ್ ಸಿಂಗ್ಉದ್ಘಾಟನಾ ಸಮಾರಂಭದ ನಂತರ ಅವರು ಮರ್ಕೆಚ್‌ನ ಪ್ರಸಿದ್ಧ ಜೆಮಾ ಎಲ್ ಎಫ್‌ನಾ ಸ್ಕ್ವೇರ್‌ಗೆ ತೆರಳಿದರು. ಅಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ರಣ್ವೀರ್ ಅಭಿನಯದ ‘ಬಾಜಿರಾವ್ ಮಸ್ತಾನಿ’ ಚಿತ್ರವನ್ನು ಪ್ರದರ್ಶಿಸಲಾಯಿತು.
ಚಿತ್ರಕೃಪೆ : ಇಂಡಿಯಾ ಟಿವಿ
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…
ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…
ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…
ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ…