ನಟ ವಿಜಯ್ ರಾಘವೇಂದ್ರ ಅವರು ಅಗಲಿದ ಪತ್ನಿ ಸ್ಪಂದನಾ ಅವರನ್ನು ನೆನಪಿಸಿಕೊಂಡು ಮತ್ತೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಮಾಸಗಳು ಕಳೆದರೂ ಮಾಸದು ಹೃದಯದೊಳಗಿನ ಈ ಮಂದಹಾಸ… ಐ ಲವ್ ಯೂ ಚಿನ್ನಾ ಎಂದು ಭಾವುಕ ಸಾಲುಗಳನ್ನು ಬರೆದು, ಹೆಂಡತಿ ಜೊತೆಗಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.
ಈ ಹಿಂದೆಯೂ ವಿಜಯ ರಾಘವೇಂದ್ರ ತಮ್ಮ 16ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ರೀತಿಯ ಭಾವುಕ ಸಾಲುಗಳನ್ನು ಬರೆದಿದ್ದರು. ಪ್ರತಿ ವರ್ಷವೂ ಸಂಭ್ರಮದಿಂದ ಆ ದಿನವನ್ನು ಬರಮಾಡಿಕೊಳ್ಳುತ್ತಿದ್ದವರು, ಸ್ಪಂದನಾ ಹೃದಯಾಘಾತದಿಂದ ನಿಧನರಾಗಿ, ವಿಜಯ್ ಅವರ ಎದೆಯಲ್ಲಿ ಆರದ ಗಾಯ ಮಾಡಿ ಹೋಗಿದ್ದಾರೆ. ಅಗಲಿದ ಪತ್ನಿಗೆ ವಿಜಯ ರಾಘವೇಂದ್ರ ಭಾವುಕ ಸಾಲುಗಳ ಮೂಲಕ ವಿಶ್ ಮಾಡಿದ್ದರು.
ಭಾವುಕ ಸಾಲುಗಳನ್ನು ಬರೆದು, ಅದಕ್ಕೆ ವಿಡಿಯೋ ಸ್ಪರ್ಶ ಕೂಡ ನೀಡಿರುವ ವಿಜಯ ರಾಘವೇಂದ್ರ ಚಿನ್ನ, ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ ಬದುಕನ್ನು ಕಟ್ಟಿ ಸರ್ವಸ್ವವಾದೆ ಉಸಿರಲ್ಲಿ ಬೆರೆತು ಜೀವಂತವಾದೆ ಮುದ್ದಾದ ನಗುವಿನಲ್ಲಿದ್ದ ಶಕ್ತಿ ಪರ್ವತದಷ್ಟು ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ ಎಂದು ಬರೆದುಕೊಂಡಿದ್ದರು.
ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಆನಂತರ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನು ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಕೂಡ ಅನೇಕರನ್ನು ಭಾವುಕರನ್ನಾಗಿಸಿದ್ದವು.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…