ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಸಲಾರ್‌ನ ಟೀಸರ್ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್ 1ರ ಸಂಜೆ 7.09ಕ್ಕೆ ಟೀಸರ್ ಬಿಡುಗಡೆಯಾಗಲಿದ್ದು, ಪ್ರಭಾಸ್ ಅಭಿಮಾನಿಗಳು ಕಾತರರಾಗಿ ಕಾಯುತ್ತಿದ್ದಾರೆ. ಈ ಹಿಂದೆ ಮೊದಲ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲಿನ ಹೈಪ್ ಹೆಚ್ಚಿಸಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ಮತ್ತೊಂದು ಟೀಸರ್ ಬಿಡುಗಡೆ ಮಾಡಿ ಚಿತ್ರದ ಮೇಲೆ ಮತ್ತಷ್ಟು ನಿರೀಕ್ಷೆ ಹೆಚ್ಚಿಸಲು ಯೋಜನೆ ಹಾಕಿಕೊಂಡಿದ್ದಾರೆ.
ಹೀಗಿರುವಾಗಲೇ ಸಲಾರ್ ಚಿತ್ರದ ಟೀಸರ್‌ನ ಸಣ್ಣ ತುಣುಕೊಂದು ಲೀಕ್ ಆಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಹೌದು, ಸಲಾರ್ ಟೀಸರ್‌ನದ್ದು ಎನ್ನಲಾದ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವರು ಇದು ನಿಜವಾಗಿಯೂ ಸಲಾರ್ ಟೀಸರ್‌ನದ್ದೇ ಎಂದು ಶೇರ್ ಕೂಡ ಮಾಡಿದ್ದಾರೆ.
ಆದರೆ ಈ ಫೋಟೊ ಹಿಂದಿನ ಅಸಲಿಯತ್ತು ಬೇರೆಯೇ ಇದೆ. ಇದು 2018ರಲ್ಲಿ ತೆರೆಕಂಡ ʼಬ್ಯಾಟ್‌ಮ್ಯಾನ್ ಡಾರ್ಕ್ ನೈಟ್ ರೈಸಸ್ʼ ಚಿತ್ರದ ದೃಶ್ಯದ ಫೋಟೊವಾಗಿದೆ. ಇದಕ್ಕೆ ಪ್ರಭಾಸ್ ಮುಖವನ್ನು ಎಡಿಟ್ ಮಾಡಿ ಇದು ಸಲಾರ್ ಚಿತ್ರದ್ದು ಎಂದು ಸುಳ್ಳು ಪೋಸ್ಟ್ ಹಂಚಿಕೊಂಡಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…