ಚಿತ್ರ ಮಂಜರಿ

ಖ್ಯಾತ ನಟ ಶರತ್ ಬಾಬು ಅನಾರೋಗ್ಯದಿಂದ ವಿಧಿವಶ

ಹೈದರಾಬಾದ್ : ಹಿರಿಯ ನಟ ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ (ಮೇ 22) ಕೊನೆಯುಸಿರೆಳೆದಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಡ್ನಿ, ಲಿವರ್ ಸೇರಿದಂತೆ ಅವರ ಅಂಗಾಂಗಗಳು ಬಾಧಿತವಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಶರತ್ ಬಾಬು ಅವರನ್ನು ಮೊದಲು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದರು. ಮೇ 5 ರಂದು ಅವರು ನಿಧನ ಹೊಂದಿದ್ದರು ಎಂದು ಸುದ್ದಿಯಾಗಿತ್ತು.

73 ರ ಹರೆಯದ ಶರತ್‌ಬಾಬು ಸುಮಾರು 50 ವರ್ಷಗಳಿಂದ 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡ ತಮಿಳು, ತೆಲುಗು ಮತ್ತು ಇತರ ಭಾಷೆಗಳಲ್ಲಿ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನಾಯಕ, ಖಳನಟ, ಪೋಷಕ ಪಾತ್ರಧಾರಿಯಾಗಿ ಸಿಕ್ಕ ಪಾತ್ರಗಳಲ್ಲೆಲ್ಲ ತಮ್ಮ ಛಾಪು ಮೂಡಿಸಿದ್ದಾರೆ.

ರಜನಿಕಾಂತ್ ಜತೆ ಮುಳ್ಳುಮ್ ಮಲರುಂ, ತ್ಲೆಕ್ಕರನ್, ಅಣ್ಣಾಮಲೈ ಮತ್ತು ಮುತ್ತು ಚಿತ್ರಗಳ ಮೂಲಕ ಅಭಿಮಾನಿಗಳನ್ನು ಆಕರ್ಷಿಸಿದ್ದರು. 1973 ರಲ್ಲಿ ತೆಲುಗು ಚಲನಚಿತ್ರದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದರು ಮತ್ತು ನಂತರ ಕೆ. ಬಾಲಚಂದರ್ ನಿರ್ದೇಶನದ ತಮಿಳು ಚಲನಚಿತ್ರ ನಿಝಲ್ ನಿಜಮಗಿರದು (1978) ಮೂಲಕ ಜನಪ್ರಿಯರಾದರು.

ತುಳಸಿದಳ, ರಣಚಂಡಿ, ಶಕ್ತಿ, ಕಂಪನ, ಗಾಯ, ಉಷಾ, ಅಮೃತ ವರ್ಷಿಣಿ, ಹೃದಯ ಹೃದಯ, ಓ ಪ್ರಿಯತಮ, ನಮ್ ಯಜಮಾನ್ರು ಅವರು ನಟಿಸಿದ ಕೆಲವು ಕನ್ನಡ ಚಿತ್ರಗಳಾಗಿವೆ.

ಶರತ್‌ಬಾಬು ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

3 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

4 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

4 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

4 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

5 hours ago