ಚಿತ್ರ ಮಂಜರಿ

ಕನ್ನಡದ ಹೆಸರಾಂತ ನಿರ್ದೇಶಕ ಎಸ್.ಕೆ. ಭಗವಾನ್ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (Dorai Bhagavan) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ (death). ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಜೋಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ ದೂರವಾಗಿದ್ದಾರೆ. ಅವರನ್ನು ಅರಸಿಕೊಂಡು ಭಗವಾನ್ ಹೊರಟಿದ್ದಾರೆ.

ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ (SK Bhagavan) ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದ ಇವರು, ರಂಗಭೂಮಿ ಹಿನ್ನೆಲೆಯುಳ್ಳವರು. ಕಾಲೇಜು ದಿನಗಳಲ್ಲಿ ರಂಗಭೂಮಿಯ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಕೊಂಡವರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು. 

1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದವರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್. ಬರೋಬ್ಬರಿ 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದ್ದು ವಿಶೇಷ. ಈ ಜೋಡಿಯ ಮತ್ತೊಂದು ದಾಖಲೆಯೆಂದರೆ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು ಈ ಜೋಡಿ  ನಿರ್ದೇಶನ ಮಾಡಿದೆ.

ಕನ್ನಡದ ಅಷ್ಟೂ ಸೂಪರ್ ಸ್ಟಾರ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಈ ಜೋಡಿಯದ್ದು. ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಅಷ್ಟೂ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

 

andolanait

Recent Posts

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

34 mins ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

1 hour ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

2 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

4 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

4 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

4 hours ago