ಬೆಂಗಳೂರು : ಕಾಪಿರೈಟ್ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನ ಅನುಮತಿ ಪಡೆಯದೆ ಬಳಕೆ ಮಾಡಿರುವ ಆರೋಪದಡಿ ರಕ್ಷಿತ್ ಶೆಟ್ಟಿ ಅವರ ವಿರುದ್ಧ ದೂರು ದಾಖಲಾಗಿದೆ.
ನವೀನ್ ಕುಮಾರ್ ಎಂಬುವವರಿಂದ ರಕ್ಷಿತ್ ಶೆಟ್ಟಿ ವಿರುದ್ಧ ದೂರು ನೀಡಿದ್ದು, ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ಅಲ್ಲದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ನವೀನ್ ಕುಮಾರ್ ಎಂಆರ್ ಟಿ ಮ್ಯೂಸಿಕ್ ನ ಪಾಲುದಾರಿಕೆ ಹೊಂದಿದ್ದಾರೆ. ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಬಳಕೆ ಆದ ನ್ಯಾಯ ಎಲ್ಲಿದೆ ಹಾಗೂ ಗಾಳಿ ಮಾತು ಚಿತ್ರದ ಹಾಡುಗಳನ್ನ ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿಯಲ್ಲಿ ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂದು ನವೀನ್ ಹೇಳಿದ್ದಾರೆ. ಹಕ್ಕುಸ್ವಾಮ್ಯ ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದು, ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿ ತನಿಖೆ ನಡೆಸುತ್ತಿದ್ದಾರೆ.