ಬೆಂಗಳೂರು : ಕಾಪಿರೈಟ್ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನ ಅನುಮತಿ ಪಡೆಯದೆ ಬಳಕೆ ಮಾಡಿರುವ ಆರೋಪದಡಿ ರಕ್ಷಿತ್ ಶೆಟ್ಟಿ ಅವರ ವಿರುದ್ಧ ದೂರು ದಾಖಲಾಗಿದೆ.
ನವೀನ್ ಕುಮಾರ್ ಎಂಬುವವರಿಂದ ರಕ್ಷಿತ್ ಶೆಟ್ಟಿ ವಿರುದ್ಧ ದೂರು ನೀಡಿದ್ದು, ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ಅಲ್ಲದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ನವೀನ್ ಕುಮಾರ್ ಎಂಆರ್ ಟಿ ಮ್ಯೂಸಿಕ್ ನ ಪಾಲುದಾರಿಕೆ ಹೊಂದಿದ್ದಾರೆ. ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಬಳಕೆ ಆದ ನ್ಯಾಯ ಎಲ್ಲಿದೆ ಹಾಗೂ ಗಾಳಿ ಮಾತು ಚಿತ್ರದ ಹಾಡುಗಳನ್ನ ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿಯಲ್ಲಿ ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂದು ನವೀನ್ ಹೇಳಿದ್ದಾರೆ. ಹಕ್ಕುಸ್ವಾಮ್ಯ ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದು, ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿ ತನಿಖೆ ನಡೆಸುತ್ತಿದ್ದಾರೆ.
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…