ಬೆಂಗಳೂರು: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರವಾದ ಗಂಧದಗುಡಿ ಟಿಕೆಟ್ ದರವನ್ನು ನಾಲ್ಕು ದಿನಗಳ ಕಾಲ ಕಡಿತ ಮಾಡಲಾಗಿದೆ. ಈ ವಿಷಯವನ್ನು ಸ್ವತಃ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಂಚಿಕೊಂಡಿದ್ದಾರೆ.
ಗಂಧದಗುಡಿ ಸಿನಿಮಾ ಟಿಕೆಟ್ ದರ ಇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಮಾಹಿತಿ ನೀಡಿದ್ದು, ನವೆಂಬರ್ 7ರಿಂದ 10ರವರೆಗೆ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಥಿಯೇಟರ್ಗಳಲ್ಲಿ ‘ಗಂಧದಗುಡಿ’ ಚಿತ್ರದ ಹೊಸ ಟಿಕೆಟ್ ದರ 56 ರೂ. ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ 112 ರೂ.ಗೆ ದಿನದ ಎಲ್ಲ ಪ್ರದರ್ಶನಗಳು ಇರಲಿದೆ ಎಂದು ಪ್ರಕಟಿಸಿದ್ದಾರೆ.
ಗಂಧದಗುಡಿ ಅಪ್ಪು ಅವರ ಕನಸು. ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಹಂಬಲ ಈ ಸಿನಿಮಾ ರೂಪುಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು. ಅದರಲ್ಲೂ ಮಕ್ಕಳು ಈ ಚಿತ್ರ ವೀಕ್ಷಣೆ ಮಾಡಬೇಕೆಂಬುದು.. ಈ ಸಲುವಾಗಿ ನಾನು ಮತ್ತು ಚಿತ್ರ ತಂಡದ ಎಲ್ಲರೊಡನೆ ಚರ್ಚಿಸಿ, ವಿತರಕರು ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಗಂಧದಗುಡಿಯನ್ನು ಸೋಮವಾರದಿಂದ ಗುರುವಾರದವರೆಗೆ ಸಿಂಗಲ್ ಸ್ಕ್ರೀನ್ ಥಿಯೇಟರ್ಗಳಲ್ಲಿ 56 ರೂ. ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ 112 ರೂ.ಗೆ ದಿನದ ಎಲ್ಲ ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿಯನ್ನು ತೋರಿಸೋಣ ಎಂಬ ಸಂದೇಶವನ್ನೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಟ್ವಿಟರ್ ಮತ್ತು ಫೇಸ್ಬುಕ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…