ಚಿತ್ರ ಮಂಜರಿ

ಗಾಂಧಿವಾದವನ್ನು ಕಿತ್ತೊಗೆಯಬೇಕು : ಚೇತನ್‌ ಅಹಿಂಸ

ಬೆಂಗಳೂರು : ನಟ ಚೇತನ್‌ ಅಹಿಂಸಾ ಅವರು ಸದಾ ಒಂದಿಲ್ಲೋಂದು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ವಿವಾದದಲ್ಲಿಯೇ ಇರುತ್ತಾರೆ. ಇದೀಗ ಚೇತನ್‌ ಅವರು ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ನಟ ಚೇತನ್‌ ಅಹಿಂಸ ಗಾಂಧಿಯವರ ʼಧಾರ್ಮಿಕ ಸಾಮರಸ್ಯʼ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ. ಖಾಸಗಿಯಾಗಿ ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ (ಆರ್ಟಿಕಲ್‌ 25) ಸಾರ್ವಜನಿಕವಾಗಿ, ನಾವು ಜಾತ್ಯಾತೀತ ರಾಷ್ಟ್ರ – ಅಂದರೆ ಧರ್ಮದಿಂದ ದೂರ
ʼಧಾರ್ಮಿಕ ಸಾಮರಸ್ಯʼ ಎಂದರೆ ಅಸಮಾನತೆಯ ಸಂರಕ್ಷಣೆ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಪ್ರಿಯಾಂಕ್‌ ಹೇಳಿಕೆಯನ್ನು ಪ್ರಸ್ತಾಪಿಸಿ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದ ನಟ ಚೇತನ್‌ ಅಹಿಂಸ  ನಟ ಚೇತನ್‌ ಅವರು ಬೆಳಗಾವಿಯ ಸುವರ್ಣಸೌಧದಲ್ಲಿರುವ ಸಾವರ್ಕರ್‌ ಜೊತೆಗೆ ಗಾಂಧೀಜಿ ಫೋಟೊವನ್ನು ಸಹ ತೆರವುಗೊಳಿಸಬೇಕು ಎಂದು ಹೇಳಿದ್ದರು.
ಪ್ರಿಯಾಂಕ್‌ ಖರ್ಗೆ ಹೇಳುತ್ತಾರೆ ಸುವರ್ಣಸೌಧ ಸಾವರ್ಕರ್‌ ಫೋಟೊ ತೆಗೆದರೆ ಸೂಕ್ತ. ಅದನ್ನು ಬಿಟ್ಟೆ ಇವತ್ತೇ ತೆಗೆಯುತ್ತೇನೆʼ
ಕಾಂಗ್ರೆಸ್‌ ಮತ್ತು ಖರ್ಗೆಯವರಿಗೆ ಸಾವರ್ಕರ್‌ ಸೈದ್ಧಾಂತಿಕ ಶತ್ರುವಾಗಿರಬಹುದು. ನಮ್ಮಂತಹ ಸಮಾನತಾವಾದಿಗಳಿಗೆ, ಸಾವರ್ಕರ್‌ ಮತ್ತು ಗಾಂಧಿ ಇಬ್ಬರೂ ನಮ್ಮ ಸೈದ್ಧಾಂತಿಕ ಶತ್ರುಗಳು.
ನೀವು ಸಾವರ್ಕರ್‌ ಮತ್ತು ಗಾಂಧಿ ಇಬ್ಬರ ಫೋಟೋಗಳನ್ನು ತೆಗೆದುಹಾಕುವುದು ಸೂಕ್ತ. ಇಲ್ಲವಾದರೆ, ಇಬ್ಬರನ್ನೂ ಇಟ್ಟುಕೊಳ್ಳಿ ಮತ್ತು ಸುವರ್ಣಸೌಧದಲ್ಲಿ ಕನ್ನಡಿಗ ತಂದೆ ಪೆರಿಯಾರ್‌ ಅವರ ಭಾವಚಿತ್ರವನ್ನು ಸೇರಿಸಿ ಎಂದಿದ್ದರು.
lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago