ಚಿತ್ರ ಮಂಜರಿ

ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ನಟಿ ಗಾಯತ್ರಿ ರಘುರಾಮ್

ಕನ್ನಡದಲ್ಲಿ ಮನಸ್ಸೆಲ್ಲಾ ನೀನೇ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟಿ ಗಾಯತ್ರಿ ರಘುರಾಮ್, ಈವರೆಗೂ ಸಲ್ಲದ ಕಾರಣಕ್ಕಾಗಿ ಸುದ್ದಿಯಾಗುತ್ತಿದ್ದರು. ಈ ಬಾರಿ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ, ಮುಡಿ ಕೊಡುವ ಮೂಲಕ ಸುದ್ದಿಯಾಗಿದ್ದಾರೆ. ತಿಮ್ಮಪ್ಪನಿಗೆ ಮುಡಿ ಕೊಡಬೇಕು ಎನ್ನುವುದು 10 ವರ್ಷಗಳ ಪ್ರಾರ್ಥನೆ ಆಗಿತ್ತಂತೆ. ಈಗ ಅದು ಈಡೇರಿದೆ. ವಾರದ ಹಿಂದೆಯಷ್ಟೇ ಉದ್ದನೆಯ ಜಡೆಯ ಫೋಟೋ ಹಾಕಿದ್ದ ಗಾಯತ್ರಿ ಇದೀಗ ಮುಡಿಕೊಟ್ಟ ಫೋಟೋ ಶೇರ್ ಮಾಡಿದ್ದಾರೆ.

ತಮಿಳು ಚಿತ್ರೋದ್ಯಮದಲ್ಲಿ ಸ್ಟಾರ್ ನಟಿ ಎಂದೇ ಗುರುತಿಸಿಕೊಂಡಿದ್ದ ಗಾಯತ್ರಿ ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರಗಳಿಗೂ ಬಣ್ಣ ಹಚ್ಚಿದ್ದಾರೆ. ಹಲವಾರು ಯಶಸ್ವಿ ಸಿನಿಮಾಗಳಿಗೆ ನಾಯಕಿಯಾಗಿದ್ದಾರೆ. ಕೇವಲ ನಟಿ ಮಾತ್ರವಲ್ಲ, ನಿರ್ಮಾಪಕಿ, ಕೊರಿಗೋಗ್ರಾಫರ್, ನಿರ್ದೇಶಕಿಯಾಗಿಯೂ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ್ದಾರೆ.

2006ರಲ್ಲಿ ದೀಪಕ್ ಚಂದ್ರಶೇಖರ್ ಜೊತೆ ಹೊಸ ಬದುಕಿಗೆ ಕಾಲಿಟ್ಟವರು ಅಲ್ಲಿಯೂ ಹೆಚ್ಚು ದಿನ ಉಳಿಯಲಿಲ್ಲ. ಮದುವೆಯಾದ ಕೇವಲ ನಾಲ್ಕೇ ನಾಲ್ಕು ವರ್ಷಕ್ಕೆ ಅವರಿಂದ ದೂರವಾದರು. ಎರಡು ವರ್ಷಗಳ ಹಿಂದೆಯಷ್ಟೇ ಚಿತ್ರೋದ್ಯಮಕ್ಕೆ ಗುಡ್ ಬೈ ಹೇಳಿದ್ದರು. ನಂತರ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದರು.

ಆನಂತರ ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡು, ಪಕ್ಷ ಕಟ್ಟಲು ಮುಂದಾದರು. ಪಕ್ಷದ ಕಲೆ ಮತ್ತು ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ನಂತರ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಲೆ ಆರೋಪ ಮಾಡಿ ರಾಜೀನಾಮೆ ಕೂಡ ನೀಡಿದ್ದರು.

lokesh

Recent Posts

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

9 mins ago

ಶಾಲಾ ಮಕ್ಕಳಿಗೆ ಕಳಪೆ ಊಟ ; ಮುಖ್ಯ ಶಿಕ್ಷಕಿ ಅಮಾನತ್ತು

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…

23 mins ago

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ…

34 mins ago

ಪ್ರೇಮಿಗಳ ದಿನಾಚರಣೆಗೆ : ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…

2 hours ago

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…

2 hours ago

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

3 hours ago