ಲಾಸ್ ಏಂಜಲೀಸ್(ಯುಎಸ್‌ಎ): ಭಾರತದ ಖ್ಯಾತ ಸಿನಿಮಾ ನಿರ್ದೇಶಕ ಎಸ್.ಎಸ್.ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರದ ನಾಟು ನಾಟು ಹಾಡು ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ 2023ರ ಅತ್ಯುತ್ತಮ ಮೂಲ (ಸ್ವತಂತ್ರ ರಚನೆ) ಹಾಡು ಪ್ರಶಸ್ತಿ ಪಡೆದುಕೊಂಡಿದೆ. ಆರ್ಆರ್ಆರ್ 2022ರ ದಕ್ಷಿಣ ಚಿತ್ರರಂಗದ ಸೂಪರ್ ಹಿಟ್ ಸಿನಿಮಾ ಆಗಿತ್ತು. ಭಾರತ ಮಾತ್ರವಲ್ಲ, ವಿದೇಶದ ಥಿಯೇಟರ್ಗಳಲ್ಲಿಯೂ ಧೂಳೆಬ್ಬಿಸಿತ್ತು.ದಕ್ಷಿಣ ಭಾರತದ ಸಿನಿಮೋದ್ಯಮದ ಜನಪ್ರಿಯ ತಾರೆಯರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಅತ್ಯದ್ಭುತ ಅಭಿನಯಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್ ನೀಡಿದ್ದರು. 1,200 ಕೊಟಿ ರೂ.ಗೂ ಅಧಿಕ ಗಳಿಗೆ ಮಾಡಿರುವ ಈ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್ ಎಂಟ್ರಿ: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಬುಧವಾರ ವರ್ಣರಂಜಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮಕ್ಕೆ ರಾಜಮೌಳಿ, ರಾಮ್ಚರಣ್ ಮತ್ತು ಜೂನಿಯರ್ ಎನ್ಟಿಆರ್ ಸೇರಿದಂತೆ ಅವರ ಕುಟುಂಬಸ್ಥರು, ಚಿತ್ರತಂಡದ ಕೆಲವರು ಭಾಗಿಯಾಗಿದ್ದರು. ಚಿತ್ರದ ಮೂವರು ಪ್ರಮುಖರು ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪ್ರಮುಖರ ಫೋಟೋಗಳೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…