ಬೆಗಳೂರು: ದಕ್ಷಿಣ ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಪುಷ್ಪ 2 ಸಿನಿಮಾದ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಏಪ್ರಿಲ್ 8ರಂದು ಪುಷ್ಪಾ 2 ಟೀಸರ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ. ಅಲ್ಲು ಅರ್ಜುನ್ ಹುಟ್ಟುಹಬ್ಬದಂದೇ ಟೀಸರ್ ಬಿಡುಗಡೆಯಾಗಲಿದೆ.
ಈ ಕುರಿತಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪುಷ್ಪಾ 2 ಸಿನಿಮಾವು ಆಗಸ್ಟ್ 15, 2024ರಂದು ಬಿಡುಗಡೆಯಾಗಲಿದೆ. ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ನಟಿಸುವ ಈ ಸಿನಿಮಾಕ್ಕೆ ಸುಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
“ಪುಷ್ಪ ಸಾಮೂಹಿಕ ಜಾತ್ರೆ ಶುರು ಮಾಡೋಣ. ಬಹು ನಿರೀಕ್ಷಿತ ಪುಷ್ಪ 2 ದಿ ರೂಲ್ ಟೀಸರ್ ಏಪ್ರಿಲ್ 8 ರಂದು ಬಿಡುಗಡೆಯಾಗಲಿದೆ. ಬೆಂಕಿಯನ್ನು ದ್ವಿಗುಣಗೊಳಿಸಲು ಬರುತ್ತಿದ್ದಾರೆ” ಎಂದು ಮೈತ್ರಿ ಮೂವೀ ಮೇಕರ್ಸ್ ಟ್ವೀಟ್ ಮಾಡಿದೆ. ಆಗಸ್ಟ್ 15 ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಇದೇ ಸಮಯದಲ್ಲಿ ಚಿತ್ರತಂಡ ಸ್ಪಷ್ಟಪಡಿಸಿದೆ.
ಏಪ್ರಿಲ್ 8 ರಂದು ಪುಷ್ಪ 2 ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಬಹಿರಂಗಪಡಿಸಿದೆ. ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನದಂದೇ ಟೀಸರ್ ಬಿಡುಗಡೆಯಾಗುವುದು ಅಲ್ಲು ಅಭಿಮಾನಿಗಳಿಗೆ ಡಬಲ್ ಖುಷಿ ತಂದಿದೆ. ಚಿತ್ರತಂಡವು ಪುಷ್ಪಾ 2 ಟೀಸರ್ ದಿನಾಂಕದ ಪೋಸ್ಟರ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಪೋಸ್ಟರ್‌ನಲ್ಲಿ ಅಲ್ಲು ಅರ್ಜುನ್ ಅವರ ಕಾಲು ಮಾತ್ರ ಕಾಣಿಸುತ್ತದೆ. ಹಿಂಬದಿಯಲ್ಲಿ ದೀಪಗಳು ಉರಿಯುತ್ತಿವೆ. ಪುಷ್ಪ ಮಾಸ ಜಾತ್ರೆ ಆರಂಭವಾಗುತ್ತಿದ್ದಂತೆಯೇ ಈ ಟೀಸರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…