ಭಾರತೀಯ ಚಿತ್ರರಂಗದ ಸ್ಟಾರ್ ನಟಿ ಶ್ರೀದೇವಿ ಅವರ 60ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಎವರ್‌ಗ್ರೀನ್ ನಾಯಕಿಗೆ ಗೂಗಲ್ ಡೂಡಲ್ ವಿಶೇಷ ಗೌರವ ಸಲ್ಲಿಸಿದೆ. ಅಕಾಲಿಕ ಮರಣ ಹೊಂದಿರೋ ಹಿರಿಯ ನಟಿಯ ಹುಟ್ಟುಹಬ್ಬಕ್ಕೆ ಗೂಗಲ್ ವಿಶೇಷವಾಗಿ ಶುಭ ಕೋರಿದೆ.
ಬಾಲಿವುಡ್‌ನ ದಿವಂಗತ ನಟಿ ಶ್ರೀದೇವಿ ಅವರ 60ನೇ ಜನ್ಮದಿನ ಗೂಗಲ್ ವಿಶೇಷ ಡೂಡಲ್ ಗೌರವ ಸಲ್ಲಿಸಿದೆ. 1963ರಲ್ಲಿ ತಮಿಳುನಾಡಿನಲ್ಲಿ ಜನಿಸಿದ ಶ್ರೀದೇವಿ ತಮ್ಮ ವೃತ್ತಿಜೀವನದ ನಾಲ್ಕು ದಶಕಗಳ ಅವಧಿಯಲ್ಲಿ ಸುಮಾರು ಮುನ್ನೂರು ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.ನಿರ್ಮಾಪಕ ಬೋನಿ ಕಪೂರ್ ಅವರನ್ನು ವರಿಸಿದ್ದ ಈ ಚೆಲುವೆಗೆ ಜಾನ್ವಿ ಮತ್ತು ಖುಷಿ ಕಪೂರ್ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ.
ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ಗೆದ್ದು ಬೀಗಿದ್ದಾರೆ. ಇಂದಿಗೂ ಅವರ ಹಿಂದಿನ ಸಿನಿಮಾಗಳನ್ನ ನೋಡಿ ಖುಷಿ ಪಡುವ ಅಭಿಮಾನಿಗಳಿದ್ದಾರೆ. ಶ್ರೀದೇವಿ ಅವರ ನಟನೆಯನ್ನು ಸ್ಪೂರ್ತಿಯಾಗಿಟ್ಟುಕೊಂಡು ಹಲವು ನಟಿಯರು ಅವರ ಹಾದಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ. ಪುತ್ರಿಯರಾದ ಜಾನ್ವಿ- ಖುಷಿ ಕಪೂರ್ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಳ್ತಿದ್ದಾರೆ.
ಕನ್ನಡದಲ್ಲಿ ಭಕ್ತ ಕುಂಬಾರ, ಹೆಣ್ಣು ಸಂಸಾರದ ಕಣ್ಣು, ಬಾಲ ಭಾರತ, ಯಶೋಧ ಕೃಷ್ಣ, ಪ್ರಿಯಾ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು. ಒಟ್ಟು ಕನ್ನಡದ 5 ಸಿನಿಮಾದಲ್ಲಿ ಶ್ರೀದೇವಿ ನಟಿಸಿದ್ದರು.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…