ಚಿತ್ರ ಮಂಜರಿ

ನಟಿ ಶ್ರೀದೇವಿ ಜನ್ಮದಿನಕ್ಕೆ ಗೂಗಲ್ ಡೂಡಲ್ ಗೌರವ

ಭಾರತೀಯ ಚಿತ್ರರಂಗದ ಸ್ಟಾರ್ ನಟಿ ಶ್ರೀದೇವಿ ಅವರ 60ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಎವರ್‌ಗ್ರೀನ್ ನಾಯಕಿಗೆ ಗೂಗಲ್ ಡೂಡಲ್ ವಿಶೇಷ ಗೌರವ ಸಲ್ಲಿಸಿದೆ. ಅಕಾಲಿಕ ಮರಣ ಹೊಂದಿರೋ ಹಿರಿಯ ನಟಿಯ ಹುಟ್ಟುಹಬ್ಬಕ್ಕೆ ಗೂಗಲ್ ವಿಶೇಷವಾಗಿ ಶುಭ ಕೋರಿದೆ.

ಬಾಲಿವುಡ್‌ನ ದಿವಂಗತ ನಟಿ ಶ್ರೀದೇವಿ ಅವರ 60ನೇ ಜನ್ಮದಿನ ಗೂಗಲ್ ವಿಶೇಷ ಡೂಡಲ್ ಗೌರವ ಸಲ್ಲಿಸಿದೆ. 1963ರಲ್ಲಿ ತಮಿಳುನಾಡಿನಲ್ಲಿ ಜನಿಸಿದ ಶ್ರೀದೇವಿ ತಮ್ಮ ವೃತ್ತಿಜೀವನದ ನಾಲ್ಕು ದಶಕಗಳ ಅವಧಿಯಲ್ಲಿ ಸುಮಾರು ಮುನ್ನೂರು ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.ನಿರ್ಮಾಪಕ ಬೋನಿ ಕಪೂರ್ ಅವರನ್ನು ವರಿಸಿದ್ದ ಈ ಚೆಲುವೆಗೆ ಜಾನ್ವಿ ಮತ್ತು ಖುಷಿ ಕಪೂರ್ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ಗೆದ್ದು ಬೀಗಿದ್ದಾರೆ. ಇಂದಿಗೂ ಅವರ ಹಿಂದಿನ ಸಿನಿಮಾಗಳನ್ನ ನೋಡಿ ಖುಷಿ ಪಡುವ ಅಭಿಮಾನಿಗಳಿದ್ದಾರೆ. ಶ್ರೀದೇವಿ ಅವರ ನಟನೆಯನ್ನು ಸ್ಪೂರ್ತಿಯಾಗಿಟ್ಟುಕೊಂಡು ಹಲವು ನಟಿಯರು ಅವರ ಹಾದಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ. ಪುತ್ರಿಯರಾದ ಜಾನ್ವಿ- ಖುಷಿ ಕಪೂರ್ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಳ್ತಿದ್ದಾರೆ.

ಕನ್ನಡದಲ್ಲಿ ಭಕ್ತ ಕುಂಬಾರ, ಹೆಣ್ಣು ಸಂಸಾರದ ಕಣ್ಣು, ಬಾಲ ಭಾರತ, ಯಶೋಧ ಕೃಷ್ಣ, ಪ್ರಿಯಾ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು. ಒಟ್ಟು ಕನ್ನಡದ 5 ಸಿನಿಮಾದಲ್ಲಿ ಶ್ರೀದೇವಿ ನಟಿಸಿದ್ದರು.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

32 mins ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

3 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

3 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

7 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

12 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

12 hours ago