Mysore
27
scattered clouds

Social Media

ಮಂಗಳವಾರ, 19 ಮೇ 2026
Light
Dark

ಹಂಸಲೇಖ ಆಸ್ಪತ್ರೆಗೆ ದಾಖಲಾಗಿರುವುದು ಒಂದು ಸುಳ್ಳು ವದಂತಿ : ಮಕ್ಕಳಿಂದ ಸ್ಪಷ್ಟನೆ

ಬೆಂಗಳೂರು: ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆನೋವಿನಿಂದ ಆಸ್ಪತ್ರೆ ದಾಖಲಾಗಿದ್ದಾರೆ ಎಂಬ ಸುದ್ದಿ ಬೆಳಗ್ಗೆಯಿಂದ ಎಲ್ಲೆಡೆ ಹರಿದಾಡುತ್ತಿದೆ. ಆದರೆ, ಇದು ಸುಳ್ಳು ಮಾಹಿತಿ ಎಂದು ಕುಟುಂಬದವರು ,ಮಾಧ್ಯಮಕ್ಕೆ ಮಾಹಿತಿ ತಿಳಿಸಿ ಇದಕ್ಕೆ ತೆರೆ ಎಳೆದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಹಂಸಲೇಖ ಅವರ ಪುತ್ರ ಸೂರ್ಯ ಪ್ರಕಾಶ್‌ ಹಾಗೂ ಪುತ್ರಿ ತೇಜಸ್ವಿನಿ “ಇಂದು ಮುಂಜಾನೆಯಿಂದ ನಮ್ಮ ತಂದೆ, ಡಾ. ಹಂಸಲೇಖಾರವರ ಆರೋಗ್ಯದ ಬಗ್ಗೆ ಹಾಗೂ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಒಂದು ವದಂತಿ ವಾರ್ತಾ ಮಾದ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. ಈ ವದಂತಿಯು ಸುಳ್ಳಾಗಿದ್ದು, ಇದರಿಂದ ಅಭಿಮಾನಿಗಳು ಆತಂಕ ಪಡಬಾರದು ಹಾಗೂ ಈ ವದಂತಿಯನ್ನು ಇನ್ನು ಹರಡದಂತೆ ನೋಡಿಕೊಳ್ಳಬೇಕು ಎಂದು ನಮ್ರತೆಯಿಂದ ಕೇಳಿಕೊಳ್ಳುತೇವೆ ಎಂದು ತಿಳಿಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!