ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿವಣ್ಣ ಅಭಿನಯಿಸಲಿರುವ ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳು ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಸಿನಿಮಾ ನಟನಾಗಬೇಕೆಂಬ ಕನಸು ಹೊತ್ತು 12 ವರ್ಷಗಳ ಹಿಂದೆ ಮಲೆನಾಡಿಂದ ಬೆಂಗಳೂರಿಗೆ ಬಂದ ನವೀನ್ ಶೆಟ್ಟಿ ಅವರು ಎಸ್. ನಾರಾಯಣ್, ಓಂ ಪ್ರಕಾಶ್ ರಾವ್, ಗಡ್ಡ ವಿಜಿ ಅವರ ಜೊತೆ ಸಹಾಯಕನಾಗಿ ಕೆಲಸ ಮಾಡಿದ್ದಾರೆ. ಇಲ್ಲಿ ಬಂದಮೇಲೆ ನಿರ್ದೇಶನದ ಮೇಲೆ ಹೆಚ್ಚು ಆಸಕ್ತಿ ಹುಟ್ಟಿ ಅದರಲ್ಲೇ ಪರಿಣತಿ ಪಡೆದಿಕೊಂಡಿದ್ದಾರೆ. ನಂತರ ಓಟಿಟಿ ವೇದಿಕೆಗೆಂದೇ ‘ನಿಧಾನವಾಗಿ ಚಲಿಸಿ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಒಮ್ಮೆ ಆ ಚಿತ್ರವನ್ನು ವೀಕ್ಷಿಸಿದ ಶಿವಣ್ಣ ಮೆಚ್ಚಿ ಬೆನ್ನು ತಟ್ಟಿದ್ದಾರೆ. ಅದೇ ಸಮಯದಲ್ಲಿ ತಾವು ಶಿವಣ್ಣ ಅವರಿಗೆಂದೇ ಮಾಡಿಕೊಂಡಿದ್ದ ‘ಧೀರ’ ಕಥೆಯನ್ನು ಹೇಳಿ ಅವರನ್ನು ಒಪ್ಪಿಸಿದ್ದಾರೆ.
ತೆರೆಮೇಲೆ ಶಿವಣ್ಣ ಅವರನ್ನು ಬೇರೆಯದೇ ರೀತಿ ತೋರಿಸ ಹೊಟಿರುವ ನವೀನ್ ಶಟ್ಟಿ, ಮಾಸ್, ಅಂಡರ್ ವರ್ಲ್ಡ್, ಮ್ಯೂಸಿಕಲ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಅನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದಾರೆ. ಕಲಿಯುಗ ಕರ್ಣ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರಕ್ಕೆ ಎಂ.ಎನ್. ಕೃಪಾಕರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಧೀರ ಚಿತ್ರದ ಪ್ರಿಪ್ರೊಡಕ್ಷನ್ ವರ್ಕ್ ನಡೆಯುತ್ತಿದ್ದು, ಶೀಘ್ರದಲ್ಲೇ ನಾಯಕಿ ಸೇರಿದಂತೆ ಉಳಿದ ತಾಂತ್ರಿಕ ವರ್ಗವನ್ನು ಪ್ರಕಟಿಸಲಾಗುವುದು.
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…