ನಾನು ಆರಾಮಾಗಿದ್ದೀನಿ, ಶೂಟಿಂಗ್ ಮುಂದುವರೆಸಿದ್ದೀವಿ; ವಿಡಿಯೋ ಮೂಲಕ ಉಪೇಂದ್ರ ಪ್ರತಿಕ್ರಿಯೆ
ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. ಚಿತ್ರೀಕರಣ ಸೆಟ್ ನಿಂದನೇ ಪ್ರತಿಕ್ರಿಯೆ ನೀಡಿರುವ ಉಪೇಂದ್ರ, ‘ನಾನು ಆರೋಗ್ಯವಾಗಿ ಇದ್ದೀನಿ, ಏನು ಆಗಿಲ್ಲ’ ಎಂದಿದ್ದಾರೆ. ಉಪೇಂದ್ರ ಸದ್ಯ ಯುಐ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಮೋಹನ್ ಬಿ ಕೆರೆ ಸ್ಟೂಡಿಯೋದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಅಲ್ಲಿಂದನೆ ಮಾತನಾಡಿದ ಉಪೇಂದ್ರ, ‘ ನಾವು ಮೋಹನ್ ಬಿ ಕೆರೆ ಸ್ಟೋಡಿಯೋದಲ್ಲಿ ಇದ್ದೀವಿ. ಆರಾಮಾಗಿ ಇದ್ದೀನಿ. ಇಲ್ಲಿ ಡಸ್ಟ್ ಜಾಸ್ತಿ ಇತ್ತು. ಹಾಗಾಗಿ ಸ್ವಲ್ಪ ಕಷ್ಟವಾಗಿತ್ತು. ಏನು ಆಗಿಲ್ಲ. ಶೂಟಿಂಗ್ ಮುಂದುವರೆಸಿದ್ದೀವಿ. ಎಲ್ಲರೂ ಇದ್ದಾರೆ ನೋಡಿ’ ಎಂದು ಹೇಳಿದ್ದಾರೆ.
ಅಂದಹಾಗೆ ಉಪೇಂದ್ರ ಯುಐ ಸಿನಿಮಾದ ಆಕ್ಷನ್ ದೃಶ್ಯಗಳ ಚಿತ್ರೀಕರಣ ಮಾಡುತ್ತಿದ್ದಾರೆ. ಥ್ರಿಲ್ಲರ್ ಮಂಜು ನಿರ್ದೇಶನದಲ್ಲಿ ಆಕ್ಷನ್ ದೃಶ್ಯದ ಚಿತ್ರೀಕರಣ ಮಾಡುತ್ತಿದ್ದಾರೆ. ಯುಐ ಸಿನಿಮಾ ಉಪೇಂದ್ರ ನಿರ್ದೇಶನ ಮಾಡಿ, ನಟಿಸುತ್ತಿರುವ ಸಿನಿಮಾ. ಈ ಸಿನಿಮಾಗೆ ನಿರ್ಮಾಪಕ ಕೆಪಿ ಶ್ರೀಕಾಂತ್ ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕಲಾವಿದರ ದೊಡ್ಡ ದಂಡೇ ಇದೆ. ನಿಧಿ ಸುಬ್ಬಯ್ಯ, ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ, ನಿರ್ಮಾಪಕ ಉಮೇಶ್ ಬಣಕಾರ್, ನಿರ್ದೇಶಕ ಓಂ ಸಾಯಿಪ್ರಕಾಶ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…