ಚಿತ್ರ ಮಂಜರಿ

‘ಥ್ಯಾಂಕ್ ಗಾಡ್’ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈ ನಕಾರ

ಮುಂಬಯಿ: ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ರಾಕುಲ್ ಪ್ರೀತ್ ಅಭಿನಯದ ಹಿಂದಿ ಚಿತ್ರ ‘ಥ್ಯಾಂಕ್ ಗಾಡ್ʼ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.

ಸಿನಿಮಾ ಅ. 25ರಂದು ಬಿಡುಗಡೆಯಾಗಲಿದೆ ಎಂಬ ಕುರಿತು ಸೆ. 9ರಂದೇ ಘೋಷಿಸಿದ್ದರೂ ತುರ್ತು ಪರಿಹಾರ ಕೋರಿ ಅ. 18ರಂದು ಅರ್ಜಿ ಸಲ್ಲಿಸಿರುವುದನ್ನು ಗಮನಿಸಿದ ನ್ಯಾ. ಆರ್‌ ಐ ಚಾಗ್ಲಾ ಅವರಿದ್ದ ಏಕ ಸದಸ್ಯ ಪೀಠ, ಸಿನಿಮಾ ಈಗ ನಿರ್ಮಾಣೋತ್ತರ ಹಂತದಲ್ಲಿದೆ (ಪೋಸ್ಟ್‌ ಪ್ರೊಡಕ್ಷನ್‌) ಅದರ ಬಿಡುಗಡೆ ದಿನಾಂಕವನ್ನು ಸೆ. 9 ರಂದು ಘೋಷಿಸಲಾಗಿತ್ತು ಎಂಬುದು ಸಂಪೂರ್ಣ ತಿಳಿದೂ ಅರ್ಜಿದಾರರು ತುರ್ತು ಮಧ್ಯಂತರ ಪರಿಹಾರ ಕೋರಿದ್ದಾರೆ. ಹೀಗಾಗಿ ಈ ಹಂತದಲ್ಲಿ ಅರ್ಜಿ ಪರಿಗಣಿಸಲು ಸಾಧ್ಯವಿಲ್ಲ ಎಂದಿತು.

ಚಿತ್ರದ ಇಬ್ಬರು ನಿರ್ಮಾಪಕರ ನಡುವಿನ ಒಪ್ಪಂದದ ಬಿಕ್ಕಟ್ಟಿನಿಂದ ಉದ್ಭವಿಸಿದ ಮೊಕದ್ದಮೆಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು. ಡ್ಯಾನಿಷ್‌ ಭಾಷೆಯ ಸಿನಿಮಾವೊಂದನ್ನು ಆಧರಿಸಿದ ʼಥ್ಯಾಂಕ್‌ ಗಾಡ್‌ʼ ಚಿತ್ರ ನಿರ್ಮಾಣದ ವಿಶೇಷ ಹಕ್ಕುಗಳನ್ನು ಫಿರ್ಯಾದಿ ಅಜುರೆ ಎಂಟರ್‌ಟೈನ್‌ಮೆಂಟ್‌ ಪ್ರೈವೇಟ್‌ ಲಿಮಿಟೆಡ್‌ ಪಡೆದಿತ್ತು. ಅಜುರೆ ಏಕಮಾತ್ರ ಮತ್ತು ವಿಶೇಷ ರಿಮೇಕ್‌ ಹಕ್ಕು ಪಡೆಯುವ ಅನುಸಾರವಾಗಿ ಮಾರುತಿ ಎಂಟರ್‌ಪ್ರೈಸಸ್‌ ಚಿತ್ರವನ್ನು ಜಂಟಿಯಾಗಿ ನಿರ್ಮಿಸಲು ಅಜುರೆಯನ್ನು ಸಂಪರ್ಕಿಸಿತ್ತು. ಆದರೆ ಹೆಸರಾಂತ ಆಡಿಯೊ ಸಂಸ್ಥೆ ಟಿ- ಸೀರಿಸ್‌ ಮತ್ತು ಮಾರುತಿ ತಾನು ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದು ತನ್ನನ್ನು ಒಳಗೊಳ್ಳದೆ ಚಿತ್ರದ ಟ್ರೇಲರ್‌ಗಳನ್ನು ನಿರ್ಮಿಸಿವೆ ಎಂದು ಅಜುರೆ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ವೇಳೆ ತುರ್ತು ಪರಿಹಾರ ನೀಡಲು ನಿರಾಕರಿಸಿದ್ದರೂ ಅರ್ಜಿಗೆ ಪ್ರತಿಕ್ರಿಯಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ಪ್ರಕರಣವನ್ನು ನ್ಯಾಯಾಲಯ ನ. 22ಕ್ಕೆ ಮುಂದೂಡಿದೆ.

andolanait

Recent Posts

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

10 mins ago

ಶಿಥಿಲಾವಸ್ಥೆಯಲ್ಲಿ ‘ದಲಿತ- ಗಾಂಧಿ’ ಶತಮಾನದ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಮಕ್ಕಳಲ್ಲಿ ಗಾಂಧೀಜಿ ಅವರ ಸರಳತೆ, ಸಹಿಷ್ಣುತೆ, ಸಮಾನತೆಯ ಚಿಂತನೆಗಳ ಅರಿವು…

14 mins ago

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

10 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

13 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

14 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

14 hours ago