ಚಿತ್ರ ಮಂಜರಿ

ಗೃಹ ಸಚಿವ ಜಿ.ಪರಮೇಶ್ವರ್, ರಮ್ಯಾ ‘ರಾಜು ಜೇಮ್ಸ್ ಬಾಂಡ್’ ಜೊತೆ

ನಟಿ ರಮ್ಯಾ ಎರಡು ವರ್ಷಗಳ ಹಿಂದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ನಿರ್ಮಿಸಿದ್ದರು. ತಾವೇ ನಿರ್ಮಿಸಿದ ಚಿತ್ರವಾದರೂ, ಅದರ ಕಾರ್ಯಕ್ರಮದಲ್ಲಿ ಎಲ್ಲೂ ಅವರು ಕಾಣಿಸಿಕೊಂಡಿರಲಿಲ್ಲ. ಇದೀಗ ಅವರು ಬಹು ವರ್ಷಗಳ ನಂತರ ಬೇರೊಂದು ಸಿನಿಮಾ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಾರ ಬಿಡುಗಡೆಯಾಗುತ್ತಿರುವ ಗುರು ನಂದನ್ ನಾಯಕನಾಗಿ ಅಭಿನಯಿಸಿರುವ ‘ರಾಜು ಜೇಮ್ಸ್ ಬಾಂಡ್’ ಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ಜೊತೆಗೆ ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.

ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾ ಣದ, ದೀಪಕ್ ಮಧು ವನಹಳ್ಳಿ ನಿರ್ದೇಶನದ ‘ರಾಜು ಜೇಮ್ಸ್ ಬಾಂಡ್’ ಚಿತ್ರದ ಈ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮುಖ್ಯ ಮಂತ್ರಿಗಳ ಆಪ್ತ ಕಾರ್ಯದರ್ಶಿ ವೆಂಕಟೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನಿರ್ಮಾಪಕರಾದ ರಮೇಶ್ ರೆಡ್ಡಿ, ನಾಯಕಿ ತಪಸ್ವಿನಿ ಶರ್ಮ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಹಾಜರಿದ್ದು ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

‘ರಾಜು ಜೇಮ್ಸ್ ಬಾಂಡ್’ ಚಿತ್ರದ ತುಣುಕು ಹಾಗೂ ಹಾಡುಗಳನ್ನು ನೋಡಿದರೆ, ಚಿತ್ರ ಯಶಸ್ವಿಯಾಗುವ ಎಲ್ಲ ಲಕ್ಷಣಗಳು ಇವೆ. ಚಿತ್ರ ಯಶಸ್ಸು ಕಾಣಲಿ’ ಎಂದು ಗೃಹ ಸಚಿವರು ಶುಭ ಕೋರಿದರು. ‘ಟ್ರೇಲರ್ ಹಾಗೂ ಹಾಡುಗಳು ತುಂಬಾ ಚೆನ್ನಾಗಿವೆ.

ಛಾಯಾ ಗ್ರಹಣವಂತೂ ಸೂಪರ್. ಅಷ್ಟೇ ಚೆನ್ನಾಗಿ ನಾಯಕ ಹಾಗೂ ನಾಯಕಿ ಅಭಿನಯಿಸಿದ್ದಾರೆ. ಪ್ರೇಮಿಗಳ ದಿನದಂದು ಬಿಡುಗಡೆ ಯಾಗುತ್ತಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ರಮ್ಯ ಹಾರೈಸಿದರು.

‘ರಾಜು ಜೇಮ್ಸ್ ಬಾಂಡ್’ ಚಿತ್ರದಲ್ಲಿ ಗುರುನಂದನ್, ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ನಟಿಸಿದ್ದು, ಮನೋಹರ್ ಜೋಶಿ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಇದೆ.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

7 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

8 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

10 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

10 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

10 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

10 hours ago