ಚಿತ್ರ ಮಂಜರಿ

ತುಮಕೂರು ವಿವಿಯಿಂದ ಟಿ.ಎಸ್ ನಾಗಾಭರಣಗೆ ಗೌರವ ಡಾಕ್ಟರೇಟ್

ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ನಾಗಾಭರಣ ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

ನಿರ್ದೇಶಕ ನಾಗಾಭರಣ ಹಾಗೂ ಸಮಾಜ ಸೇವಕ ಆರ್‌.ಎಲ್ ರಮೇಶ್‌ಬಾಬು ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಇವರಿಬ್ಬರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಕನ್ನಡ ಸಿನಿಮಾ, ರಂಗಭೂಮಿಗೆ ವಿಶಿಷ್ಟ ಕೊಡುಗೆ ನೀಡಿರುವ ಟಿ. ಎಸ್. ನಾಗಾಭರಣ ಅವರು 35ಕ್ಕಿಂತ ಹೆಚ್ಚು ಸಿನಿಮಾಗಳ ನಿರ್ದೇಶನ ಮಾಡಿದ್ದಾರೆ.

ಸಂತ ಶಿಶುನಾಳ ಶರೀಫ, ಚಿನ್ನಾರಿ ಮುತ್ತ, ನಾಗಮಂಡಲ, ಸಿಂಗಾರೆವ್ವ, ಕಲ್ಲರಳಿ ಹೂವಾಗಿ, ಅಲ್ಲಮ ಮುಂತಾದ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ನಾಗಾಭರಣ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ.

ಹಾಗೆಯೇ ಗೌರವ ಡಾಕ್ಟರೇಟ್‌ಗೆ ಭಾಜನರಾಗುತ್ತಿರುವ ತುಮಕೂರು ಮೂಲದ ರಮೇಶ್‌ಬಾಬು ಸಮಾಜ ಸೇವಕರು ಹಾಗೂ ಕೈಗಾರಿಕೋದ್ಯಮಿಗಳು. ತಮ್ಮ ಕಠಿಣ ಪರಿಶ್ರಮ ಮತ್ತು ಸಂಕಲ್ಪದಿಂದ ಭಗವಾನ್ ರೈಸ್ ಮಿಲ್, ಭಗವತಿ ಭಗವಾನ್ ರೈಸ್ ಮಿಲ್ ಮತ್ತು ರಾಜಲಕ್ಷಿ ಆಗ್ರೊ ಫುಡ್ಸ್ ಹೆಮ್ಮೆಯ ಮಾಲೀಕರಾದರು. ಈ ಮೂಲಕ 150ಕ್ಕೂ ಹೆಚ್ಚು ಕುಟುಂಬಗಳಿಗೆ ಉದ್ಯೋಗವನ್ನು ಕಲ್ಪಿಸಿದ್ದಾರೆ.

ತುಮಕೂರು ವಿವಿ ವತಿಯಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲು ನೇಮಿಸಿದ್ದ ಸಮಿತಿಯ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆಗಸ್ಟ್ 7ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ.

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

44 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

54 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago