ನಟಿ ರಮ್ಯಾ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಸುದ್ದಿ ಮತ್ತಿತ್ತರ ಕಂಟೆಂಟ್ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್ನಲ್ಲಿ ಒತ್ತಾಯಿಸಿದ್ದಾರೆ. ಇದು ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 21ರಂದು ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಈಗ ಕೊನೇ ಕ್ಷಣದಲ್ಲಿ ರಮ್ಯಾ ಅವರಿಂದ ಲೀಗಲ್ ನೋಟೀಸ್ ಬಂದಿರುವುದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಮೊದಲು ರಮ್ಯಾ ಅವರು ಈ ಸಿನಿಮಾದ ಪ್ರೋಮೋ ಶೂಟ್ನಲ್ಲಿ ಭಾಗಿ ಆಗಿದ್ದರು. ಆದರೆ ಈಗ ಅವರು ಲೀಗಲ್ ನೋಟೀಸ್ ಕಳಿಸಿರುವುದು ಅಚ್ಚರಿ ಮೂಡಿಸಿದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್ ಶೆಟ್ಟಿ, ದಿಗಂತ್, ಪವನ್ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್ ಅನ್ನು ಯೂಟ್ಯೂಬ್ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್ ಆದೇಶಿಸಿದೆ ಎಂದು ಈ ಲೀಗಲ್ ನೋಟೀಸ್ನಲ್ಲಿ ತಿಳಿಸಲಾಗಿದೆ.
ನಿತಿನ್ ಕೃಷ್ಣಮೂರ್ತಿ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಪರಂವಾ ಪಿಕ್ಚರ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…