Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

2023 ಮಾರ್ಚ್‌ 30 ರಿಂದ ʼಹೊಯ್ಸಳʼನಾಗಿ ಡಾಲಿ ಉತ್ಸವ ಶುರು

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರ 25ನೇ ಚಿತ್ರ ಹೊಯ್ಸಳ ಸಿನಿಮಾವು 2023 ಮಾರ್ಚ್‌ 30 ರಿಂದ ತೆರೆಯ ಮೇಲೆ ತನ್ನ ಅಬ್ಬರವನ್ನು ಶುರುವಿಡಲಿದೆ. ಈ ಬಗ್ಗೆ ನಟ ಡಾಲಿ ಧನಂಜಯ ಅವರೇ ತಮ್ಮ ಟ್ವೀಟರ್‌ ನಲ್ಲಿ ವಿಚಾರವನ್ನು ಹಂಚಿಕೊಳ್ಳುವುದರ ಮೂಲಕ ತಿಳಿಸಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಬಹುಪಾಲು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಸಲಾಗಿದೆ. ಡಾಲಿ ಧನಂಜಯ ಈ ಚಿತ್ರದಲ್ಲಿ ಗುರುದೇವ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ವಿಜಯ್ ನಾಗೇಂದ್ರ “ಹೊಯ್ಸಳ” ಚಿತ್ರದ ನಿರ್ದೇಶಕರು.  ಈ ಹಿಂದೆ ಗಣೇಶ್ ಅಭಿನಯದ “ಗೀತಾ” ಚಿತ್ರವನ್ನು ವಿಜಯ್ ನಾಗೇಂದ್ರ ನಿರ್ದೇಶನ ಮಾಡಿದ್ದರು.  ಅಜನೀಶ್ ಲೋಕನಾಥ್ ಆವರ  ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಇತ್ತೀಚೆಗೆ ನಾಯಕ ಧನಂಜಯ ಅವರ “ಹೊಯ್ಸಳ” ಚಿತ್ರದ ಫಸ್ಟ್ ಲುಕ್ ಸಹ ನಿರ್ಮಾಣ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್ ನಿಂದ ಬಿಡುಗಡೆ ಮಾಡಿದ್ದು.ಇದೀಗ ಚಿತ್ರವು ತೆರೆ ಕಾಣಲಿರುವ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ.

ಮೈಸೂರಿನ ಭಾಗದ ಚಿತ್ರೀಕರಣದಲ್ಲಿ ನಾಯಕ ಧನಂಜಯ, ನಾಯಕಿ ಅಮೃತ ಅಯ್ಯಂಗಾರ್, ಅಚ್ಯುತ್ ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದ ಕಲಾವಿದರು ಭಾಗಿಯಾಗಿದ್ದಾರೆ. ಸಾಹಸ ನಿರ್ದೇಶಕರಾದ ದಿಲೀಪ್ ಸುಬ್ರಹ್ಮಣ್ಯ ಹಾಗೂ ಅರ್ಜುನ್ ಮಾಸ್ಟರ್ ಅವರ ಸಾಹಸ ಸಂಯೋಜನೆಯಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!