Mysore
24
overcast clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ʼನಾನು ಬದುಕಿದ್ದೇನೆʼ : ವಿಡಿಯೋ ಮಾಡಿ ಶಾಕ್ ಕೊಟ್ಟ ಪೂನಂ ಪಾಂಡೆ

ನಿನ್ನೆಯಷ್ಟೇ (ಫೆ.2) ರಂದು ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ ಹೊಂದಿದ್ದರು ಎಂಬ ಬಗ್ಗೆ ಪೂನಂ ಅವರ ಇನ್ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್‌ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.

ಪೂನಂ ನಿಧನ ಇಡೀ ದೇಶವೇ ಚರ್ಚೆ ಮಾಡುವಂತೆ ಮಾಡಿತ್ತು. ಪೂನಂ ಸತ್ತಿರುವ ಸಮಾಚಾರದ ಹೊರತಾಗಿ ಬೇರೆ ಯಾವ ಫೋಟೋಗಳು ಆಚೆ ಬರಲಿಲ್ಲ. ಹಾಗಾಗಿ ಸಹಜವಾಗಿಯೇ ಸಾವಿನ ಬಗ್ಗೆ ಅನುಮಾನ ಮೂಡಿತ್ತು.

ಇದೀಗ ತಾನು ಬದುಕಿರುವ ಬಗ್ಗೆ ಸ್ವತಃ ಪೂನಂ ಅವರೇ ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ. ಹಾಗೆ ಮಸೇಜ್ ಮಾಡಲು ಕಾರಣವಿದೆ. ಗರ್ಭಕೋಶ ಕಂಠ ಕ್ಯಾನ್ಸರ್ ಕುರಿತಾದ ಜಾಗೃತಿ ಮೂಡಿಸಬೇಕಿತ್ತು. ಹಾಗಾಗಿ ಈ ಪೋಸ್ಟ್ ಮಾಡಲಾಯಿತು. ದಯವಿಟ್ಟು ಈ ಕ್ಯಾನ್ಸರ್ ಕುರಿತಂತೆ ಜಾಗೃತ ವಹಿಸಿ ಎಂದು ಪೂನಂ ವಿಡಿಯೋ ಮೂಲಕ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ಬಿಟ್ಟಿ ಪ್ರಚಾರ ಪಡೆಯಲು ಅವರು ಈ ರೀತಿ ಮಾಡಿದ್ದಾರೆ’ ಎಂದು ಅನೇಕರು ಹೇಳಿದ್ದಾರೆ.

ಪೂನಂ ಬದುಕಿರುವ ಸಮಾಚಾರ ತಿಳಿದು ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ಜಗತ್ತನ್ನೇ ಫೂಲ್ ಮಾಡಿದ ಪೂನಂರನ್ನು ಕೆಲವರು ತರಾಟೆಗೂ ತೆಗೆದುಕೊಂಡಿದ್ದಾರೆ. ಏನೇ ಇರಲಿ.. ಈ ಮಾರ್ಗದ ಮೂಲಕ ಜಾಗೃತಿ ಮೂಡಿಸುವುದು ತರವಲ್ಲ ಎನ್ನುವುದು ಅನೇಕರ ಅಭಿಪ್ರಾಯವಾಗಿದೆ.

ಪೋಸ್ಟ್​ ನಲ್ಲೇನಿದೆ? : ‘ನಾನು ಬದುಕಿದ್ದೇನೆ. ಗರ್ಭಕಂಠ ಕ್ಯಾನ್ಸರ್​ನಿಂದ ನಾನು ಸತ್ತಿಲ್ಲ. ಆದರೆ, ಈ ರೋಗವನ್ನು ಹೇಗೆ ಎದುರಿಸಬೇಕು ಎನ್ನುವ ಜ್ಞಾನ ಇಲ್ಲದೆ ಸಾವಿರಾರು ಮಹಿಳೆಯರು ಸಾಯುತ್ತಿದ್ದಾರೆ. ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಇದು ಭಿನ್ನವಾಗಿದೆ. ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಯಬಹುದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳಿಂದ ಇದು ಸಾಧ್ಯ. ಈ ಕಾಯಿಲೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ’ ಎಂದು ಅವರು ಹೇಳಿದ್ದಾರೆ. #DeathToCervicalCancer ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ವೀಡಿಯೊ ಒಂದನ್ನು ಹಂಚಿಕೊಂಡು ತಾವು ಬದುಕಿರುವ ಬಗ್ಗೆ ತಿಳಿಸಿದ್ದಾರೆ.

https://www.instagram.com/reel/C24C5DCtyRU/?utm_source=ig_web_button_share_sheet

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!