ನಿನ್ನೆಯಷ್ಟೇ (ಫೆ.2) ರಂದು ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ ಹೊಂದಿದ್ದರು ಎಂಬ ಬಗ್ಗೆ ಪೂನಂ ಅವರ ಇನ್ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್‌ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.
ಪೂನಂ ನಿಧನ ಇಡೀ ದೇಶವೇ ಚರ್ಚೆ ಮಾಡುವಂತೆ ಮಾಡಿತ್ತು. ಪೂನಂ ಸತ್ತಿರುವ ಸಮಾಚಾರದ ಹೊರತಾಗಿ ಬೇರೆ ಯಾವ ಫೋಟೋಗಳು ಆಚೆ ಬರಲಿಲ್ಲ. ಹಾಗಾಗಿ ಸಹಜವಾಗಿಯೇ ಸಾವಿನ ಬಗ್ಗೆ ಅನುಮಾನ ಮೂಡಿತ್ತು.
ಇದೀಗ ತಾನು ಬದುಕಿರುವ ಬಗ್ಗೆ ಸ್ವತಃ ಪೂನಂ ಅವರೇ ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ. ಹಾಗೆ ಮಸೇಜ್ ಮಾಡಲು ಕಾರಣವಿದೆ. ಗರ್ಭಕೋಶ ಕಂಠ ಕ್ಯಾನ್ಸರ್ ಕುರಿತಾದ ಜಾಗೃತಿ ಮೂಡಿಸಬೇಕಿತ್ತು. ಹಾಗಾಗಿ ಈ ಪೋಸ್ಟ್ ಮಾಡಲಾಯಿತು. ದಯವಿಟ್ಟು ಈ ಕ್ಯಾನ್ಸರ್ ಕುರಿತಂತೆ ಜಾಗೃತ ವಹಿಸಿ ಎಂದು ಪೂನಂ ವಿಡಿಯೋ ಮೂಲಕ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ಬಿಟ್ಟಿ ಪ್ರಚಾರ ಪಡೆಯಲು ಅವರು ಈ ರೀತಿ ಮಾಡಿದ್ದಾರೆ’ ಎಂದು ಅನೇಕರು ಹೇಳಿದ್ದಾರೆ.
ಪೂನಂ ಬದುಕಿರುವ ಸಮಾಚಾರ ತಿಳಿದು ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ಜಗತ್ತನ್ನೇ ಫೂಲ್ ಮಾಡಿದ ಪೂನಂರನ್ನು ಕೆಲವರು ತರಾಟೆಗೂ ತೆಗೆದುಕೊಂಡಿದ್ದಾರೆ. ಏನೇ ಇರಲಿ.. ಈ ಮಾರ್ಗದ ಮೂಲಕ ಜಾಗೃತಿ ಮೂಡಿಸುವುದು ತರವಲ್ಲ ಎನ್ನುವುದು ಅನೇಕರ ಅಭಿಪ್ರಾಯವಾಗಿದೆ.
ಪೋಸ್ಟ್ ನಲ್ಲೇನಿದೆ? : ‘ನಾನು ಬದುಕಿದ್ದೇನೆ. ಗರ್ಭಕಂಠ ಕ್ಯಾನ್ಸರ್ನಿಂದ ನಾನು ಸತ್ತಿಲ್ಲ. ಆದರೆ, ಈ ರೋಗವನ್ನು ಹೇಗೆ ಎದುರಿಸಬೇಕು ಎನ್ನುವ ಜ್ಞಾನ ಇಲ್ಲದೆ ಸಾವಿರಾರು ಮಹಿಳೆಯರು ಸಾಯುತ್ತಿದ್ದಾರೆ. ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಇದು ಭಿನ್ನವಾಗಿದೆ. ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಯಬಹುದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳಿಂದ ಇದು ಸಾಧ್ಯ. ಈ ಕಾಯಿಲೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ’ ಎಂದು ಅವರು ಹೇಳಿದ್ದಾರೆ. #DeathToCervicalCancer ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ವೀಡಿಯೊ ಒಂದನ್ನು ಹಂಚಿಕೊಂಡು ತಾವು ಬದುಕಿರುವ ಬಗ್ಗೆ ತಿಳಿಸಿದ್ದಾರೆ.
https://www.instagram.com/reel/C24C5DCtyRU/?utm_source=ig_web_button_share_sheet
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…