ನೆನ್ನೆಯಷ್ಟೇ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಜನಿಕಾಂತ್ ಸೇರಿದಂತೆ ಸಾಕಷ್ಟು ಗಣ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಮನಬಿಚ್ಚಿ ಮಾತನಾಡಿದ ರಜನಿ, ಅಭಿಮಾನಿಗಳು ತಮ್ಮನ್ನು ಅಭಿಮಾನದಿಂದ ಕರೆಯುವ ಸೂಪರ್ ಸ್ಟಾರ್ ಪದವನ್ನು ಕಿತ್ತುಹಾಕಿ ಎಂದು ಹೇಳಿದ್ದರ ಕುರಿತು ಮಾತನಾಡಿದರು.
ಈ ಸೂಪರ್ ಸ್ಟಾರ್ ಪದ ಯಾವಾಗಲೂ ನನಗೆ ಸಮಸ್ಯೆಯನ್ನುಂಟು ಮಾಡಿದೆ. ಜೈಲರ್ ಸಿನಿಮಾದ ಹಾಡಿನಲ್ಲೂ ಸೂಪರ್ ಸ್ಟಾರ್ ಎನ್ನುವ ಪದ ನುಸುಳಿದೆ. ಸಾಹಿತ್ಯ ಬರೆದಿರುವ ಸೂಪರ್ ಸುಬು ಅವರಿಗೆ ಹೇಳಿದ್ದೆ. ನನಗೂ ಈ ಸೂಪರ್ ಸ್ಟಾರ್ ಪದಕ್ಕೂ ಯಾಕೋ ಕೂಡಿ ಬರುತ್ತಿಲ್ಲ ಎಂದರು. ಜೊತೆಗೆ ಜೈಲರ್ ಸಿನಿಮಾದ ನಿರ್ದೇಶಕ ನೆಲ್ಸನ್ ಅವರನ್ನು ಈ ಸಿನಿಮಾದಿಂದ ತೆಗೆದುಹಾಕಿ ಎಂದೆಲ್ಲ ವಿರೋಧ ಬಂತು. ಅದಕ್ಕೆ ನಾನು ಒಪ್ಪಲಿಲ್ಲ ಎನ್ನುವ ಮಾತುಗಳನ್ನೂ ಆಡಿದರು.
ಒಂದು ಕಡೆ ಸಿನಿಮಾದ ಹಾಡುಗಳ ಸಂಭ್ರಮ ಜೋರಾಗಿದ್ದರೆ ಮತ್ತೊಂದು ಕಡೆ ಚಿತ್ರದ ಟೈಟಲ್ ಕುರಿತು ಸಂಕಷ್ಟ ಎದುರಾಗಿದೆ. ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದ್ದು, ಈ ಸಂದರ್ಭದಲ್ಲಿ ಮಲಯಾಳಂ ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ.
ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ ಜೈಲರ್ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಕೂಡ ಬಿಡುಗಡೆಗೆ ಸಿದ್ಧವಾಗಿತ್ತು. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರೆದಿತ್ತು.
ಈಗ ಸಕ್ಕಿರ್ ಮಡತ್ತಿಲ್ಲ ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಜೊತೆ ಜೊತೆಗೆ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಿಲೀಸ್ ದಿನವೇ ಮಲಯಾಳಂನಲ್ಲಿ ತಮ್ಮ ಜೈಲರ್ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 10ಕ್ಕೆ ತಮ್ಮ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…