ಚಿತ್ರ ಮಂಜರಿ

ಮಹಿಳೆಯರಿಗೆ ಪ್ರಾತಿನಿಧ್ಯವನ್ನು ನೀಡುವ ದಿನವನ್ನು ನಾನು ಎದುರು ನೋಡುತ್ತಿದ್ದೇನೆ: ಕಮಲ್‌ ಹಾಸನ್‌

ನವದೆಹಲಿ : ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಒದಗಿಸುವ ನಾರಿಶಕ್ತಿ ವಂದನಾ ಅನಿಯಮಂ ವಿಧೇಯಕ ಮಂಡಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ದಕ್ಷಿಣ ಭಾರತದ ಸೂಪರ್ ಸ್ಟಾರ್ ಕಮಲಹಾಸನ್ ಹಾಡಿ ಹೊಗಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವ ಕಮಲಹಾಸನ್, ಆದಷ್ಟು ಶೀಘ್ರ ಮಸೂದೆಯನ್ನು ಸಂಸತ್‍ನ ಉಭಯ ಸದನಗಳಲ್ಲಿ ಬಹುಮತದಿಂದ ಅಂಗೀಕರಿಸಿ ವಿಧಾನಸಭೆಗೂ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಮುಂದಿನ ಜನಗಣತಿಯ ನಂತರ ಮಸೂದೆ ಜಾರಿ ಬರುವುದಕ್ಕೆ ಅಸಮಾಧಾನ ಹೊರಹಾಕಿದ್ದು, ಇದರಿಂದ ವಿಳಂಬವಾಗುತ್ತದೆ. ಗಣರಾಜ್ಯದ ಇತಿಹಾಸದಲ್ಲಿ ಇದೊಂದು ಹೆಗ್ಗುರುತು ದಿನವಾಗಿದೆ. ಅಲ್ಪಸಂಖ್ಯಾತ ಭಾರತದ ಮಹಿಳೆಯರ ವಿರುದ್ಧದ ದೀರ್ಘಕಾಲದ ಅನ್ಯಾಯ ಸರಿಪಡಿಸಲಾಗಿದೆ ಎಂದು ಕೊಂಡಾಡಿದ್ದಾರೆ.

ನಮ್ಮ ಗಣರಾಜ್ಯದ ಇತಿಹಾಸದಲ್ಲಿ ಒಂದು ಹೆಗ್ಗುರುತು ದಿನವಾಗಿದೆ. ನಮ್ಮ ಪ್ರಜಾಪ್ರಭುತ್ವದ ಸ್ಥಾನವು ಅದರ ಹೊಸ ಮನೆ(ಸಂಸತ್)ಗೆ ಸ್ಥಳಾಂತರಗೊಂಡಿತು. ಈ ಹೊಸ ಸಂಸತ್‍ನಲ್ಲಿ ಮಂಡಿಸಲಾದ ಮೊದಲ ಮಸೂದೆಯು ನಮ್ಮ ರಾಷ್ಟ್ರದ ಅತಿ ದೊಡ್ಡ ಅಲ್ಪಸಂಖ್ಯಾತರಾದ ಭಾರತದ ಮಹಿಳೆಯರ ವಿರುದ್ಧದ ದೀರ್ಘಕಾಲದ ಅನ್ಯಾಯವನ್ನು ಸರಿಪಡಿಸಿದೆ ಎಂದು ನಾನು ಸಂತೋಷಪಡುತ್ತೇನೆ. ನಿನ್ನೆ ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ನಾನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ.

ಲಿಂಗ ಸಮಾನತೆಯನ್ನು ಖಾತ್ರಿಪಡಿಸುವ ರಾಷ್ಟ್ರಗಳು ಯಾವಾಗಲೂ ಏಳಿಗೆ ಹೊಂದುತ್ತವೆ. ಮಸೂದೆಯ ಮೇಲಿನ ಸಂಸತ್‍ನ ಚರ್ಚೆಯ ಸಮಯದಲ್ಲಿ ಈ ಕೆಳಗಿನ ಕಾಳಜಿಗಳನ್ನು ಸರಿಪಡಿಸಲು ನಾನು ಎಲ್ಲ ಪಕ್ಷಗಳಿಗೆ ಕರೆ ನೀಡುತ್ತೇನೆ. ಮೊದಲನೆಯದಾಗಿ ಮುಂದಿನ ಜನಗಣತಿ ಮತ್ತು ಡಿಲಿಮಿಟೇಶನ್ ನಂತರವೇ ಮಸೂದೆ ಜಾರಿಗೆ ಬರುತ್ತದೆ. ಇವೆರಡೂ ಈ ಹಿಂದೆಯೇ ವಿಳಂಬವಾಗಿವೆ. ಹೀಗಾಗಿ ಇಂತಹ ವಿಳಂಬ ಸಮಯವೂ ಮಹತ್ವದ ನಿರ್ಧಾರದ ಬಗ್ಗೆ ಕೇವಲ ಮಾತಿಗೆ ಸೀಮಿತವಾಗುವಂತೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಇದನ್ನು ತೆಗೆದುಹಾಕಬೇಕು ಎಂದಿದ್ದಾರೆ.

ಎರಡನೆಯದಾಗಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ರಾಜ್ಯಸಭೆ ಮತ್ತು ರಾಜ್ಯ ವಿಧಾನ ಪರಿಷತ್ತುಗಳಿಗೆ ವಿಸ್ತರಿಸಬೇಕು. ಯಾವುದೇ ದೃಢೀಕರಣದ ನೆರವು ಇಲ್ಲದೆ ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಅನುಪಾತದ ಪ್ರಾತಿನಿಧ್ಯವನ್ನು ನೀಡುವ ದಿನವನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago