ಬೆಂಗಳೂರು: ಡ್ರಗ್ಸ್ ಪೆಡ್ಲರ್ ನೊಂದಿಗೆ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ನಿರ್ಮಾಪಕರೊಬ್ಬರು ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2 ವರ್ಷದ ಹಿಂದೆ ಚಿತ್ರ ನಿರ್ಮಾಪಕ ಮದುವೆಯಾಗಿ ಪತ್ನಿಯೊಂದಿಗೆ ಸಿಕೆ ಅಚ್ಚುಕಟ್ಟು ಎರಡನೇ ಹಂತದಲ್ಲಿ ವಾಸವಾಗಿದ್ದಾರೆ.
ತನ್ನ ಪತ್ನಿ ಮಾದಕ ವ್ಯಸನಿ. ಆಕೆಗೆ ಬುದ್ಧಿ ಹೇಳಿದರೂ ಕೇಳುತ್ತಿಲ್ಲ, ಡ್ರಗ್ಸ್ ಪೆಡ್ಲರ್ ಜೊತೆ ಸಂಬಂಧ ಹೊಂದಿದ್ದಾಳೆ, ಬುದ್ಧಿವಾದ ಹೇಳಿದಕ್ಕೆ ಇಬ್ಬರೂ ಸೇರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಿರ್ಮಾಪಕ ದೂರು ನೀಡಿದ್ದಾರೆ.
ಪ್ರತಿದೂರು- ನಿರ್ಮಾಪಕನ ವಿರುದ್ಧ ಪತ್ನಿ ಪ್ರತಿದೂರು ನೀಡಿದ್ದಾರೆ. ನನ್ನ ಪತಿ, ನಿರ್ಮಾಪಕ ವಿನಾ ಕಾರಣ ಸ್ನೇಹಿತರ ಜೊತೆ ಬಂದು ನನ್ನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ದೂರು ನೀಡಿದ್ದಾರೆ. ಇದೀಗ ದೂರು- ಪ್ರತಿದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…